ಸೋಮವಾರ, ಮೇ 17, 2021
31 °C
ಇಂಗ್ಲಿಷ್, ಮರಾಠಿಯಲ್ಲಿ ಪ್ರಮಾಣವಚನ

ಚಿಕ್ಕಮಗಳೂರು: ಶಾಸಕರ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಮರಾಠಿ ಮತ್ತು ಆಂಗ್ಲಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕರ ನಿಲುವು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.ಹಳೇ ತಾಲ್ಲೂಕು ಕಚೇರಿ ಆವರಣದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಹನುಮಂತಪ್ಪ ವೃತ್ತದಲ್ಲಿ ಮರಾಠಿ, ಆಂಗ್ಲಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದವರ ವಿರುದ್ಧ ಅವರ ಪ್ರತಿಕೃತಿ ಸುಟ್ಟು ಹಾಕಿದರು.ಬೆಳಗಾವಿ ಶಾಸಕರಾದ ಸಾಂಬಾಜಿ ಪಾಟೀಲ್, ಅರವಿಂದ ಪಾಟೀಲ ಮರಾಠಿ ಭಾಷೆಯಲ್ಲಿ, ಖಮರುಲ್ಲಾ ಇಸ್ಲಾಂ, ಅಶೋಕ್‌ಖೇಣಿ ಮತ್ತು ಉಮೇಶ್ ಜಾದವ್ ಆಂಗ್ಲಭಾಷೆಯಲ್ಲಿ ಪ್ರಮಾಣ ವಚನಸ್ವೀಕರಿಸಿದ್ದು, ಇವರು ನಾಡಿನ ಜನತೆಯ ಕ್ಷಮೆಯಾಚಿಸಬೇಕು. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸದ ಶಾಸಕರ ಸದಸ್ಯತ್ವ ರದ್ದುಪಡಿಸಲು ವಿಧಾನಸಭೆ ಅಧ್ಯಕ್ಷರು ಮುಂದಾಗಬೇಕು. ಇಲ್ಲದಿದ್ದರೆ ಕನ್ನಡ ವಿರೋಧಿ ಶಾಸಕರ ಮುಖಕ್ಕೆ ಮಸಿ ಬಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ತೇಗೂರು ಜಗದೀಶ, ಮುಖಂಡರಾದ ಸಿದ್ದೇಗೌಡ, ಇರ್ಷಾದ್ ಅಹ್ಮದ್, ಆರ್.ಕುಮಾರ್, ಎಸ್.ಆರ್.ಮನೋಜ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.