ಬೆಂಗಳೂರು: ವಿಧಾನ ಪರಿಷತ್ತಿಗೆ ಚಿತ್ರಕಲಾ ಕ್ಷೇತ್ರದ ಹಿರಿಯರೊಬ್ಬರನ್ನು ಸದಸ್ಯರಾಗಿ ನೇಮಕ ಮಾಡಬೇಕು ಎಂದು `ಸಾಹಿತಿ ಕಲಾವಿದರ ಸಾಂಸ್ಕೃತಿಕ ವೇದಿಕೆ~, ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಒತ್ತಾಯಿಸಿದೆ.

ಸಾಂಸ್ಕೃತಿಕ ಕ್ಷೇತ್ರದ ಗಣ್ಯರನ್ನು ವಿಧಾನ ಪರಿಷತ್ತಿಗೆ ನೇಮಕ ಮಾಡುವ ಸಂಪ್ರದಾಯ ರಾಜ್ಯದಲ್ಲಿ ಹಿಂದಿನಿಂದಲೂ ಜಾರಿಯಲ್ಲಿದೆ. ಆದರೆ ಚಿತ್ರಕಲಾ ಕ್ಷೇತ್ರಕ್ಕೆ ಸೇರಿದ ಯಾರೂ ಇದುವರೆಗೆ ವಿಧಾನ ಪರಿಷತ್ತಿನ ಸದಸ್ಯರಾಗಿ ನೇಮಕಗೊಂಡಿಲ್ಲ. ಹಾಗಾಗಿ, ಈ ಕ್ಷೇತ್ರದ ಹಿರಿಯ, ಖ್ಯಾತ, ಸಮಾಜಮುಖಿ ವ್ಯಕ್ತಿಯನ್ನು ಪರಿಷತ್ ಸದಸ್ಯರನ್ನಾಗಿ ನಾಮಕರಣ ಮಾಡಬೇಕು ಎಂದು ವೇದಿಕೆ ಪತ್ರದ ಮೂಲಕ ಆಗ್ರಹಿಸಿದೆ.

ಈ ಸಂಬಂಧ ಮುಖ್ಯಮಂತ್ರಿಯವರಿಗೆ ಬರೆದಿರುವ ಪತ್ರಕ್ಕೆ ಸಂಶೋಧಕ ಡಾ.ಎಂ. ಚಿದಾನಂದಮೂರ್ತಿ, ಕಲಾವಿದ ಸಿ. ಚಂದ್ರಶೇಖರ, ಸಾಹಿತಿಗಳಾದ ಪ್ರೊ. ಚಂದ್ರಶೇಖರ ಪಾಟೀಲ, ಪ್ರೊ. ಬರಗೂರು ರಾಮಚಂದ್ರಪ್ಪ, ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ವೆಂಕಟಾಚಲಪತಿ, ಡಾ.ಜಿ. ಲಕ್ಷ್ಮೀಪತಿ, ಎಂ.ಜಿ. ದೊಡ್ಡಮನಿ, `ಪುಸ್ತಕಮನೆ~ ಹರಿಹರಪ್ರಿಯ, ರಮೇಶ ತೇರದಾಳ ಮತ್ತಿತರರು ಸಹಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.