ಚಿತ್ರಕಲಾ ಪ್ರದರ್ಶನ ನಾಳೆ

7

ಚಿತ್ರಕಲಾ ಪ್ರದರ್ಶನ ನಾಳೆ

Published:
Updated:

ಗುಲ್ಬರ್ಗ: ಚೈತನ್ಯಮಯಿ ಆರ್ಟ್ ಗ್ಯಾಲರಿ ದಶಮಾನೋತ್ಸವ ಸಂಭ್ರಮದ ನಿಮಿತ್ತ ನಗರದ ಕನ್ನಡ ಭವನದಲ್ಲಿ ಭಾನುವಾರದಿಂದ ಮಂಗಳವಾರದವರೆಗೆ ಮೂರು ದಿನಗಳ ಕಾಲ ಚಿತ್ರಕಲಾ ಪ್ರದರ್ಶನ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಚೈತನ್ಯಮಯಿ ಆರ್ಟ್ ಗ್ಯಾಲರಿ, ವಿಕಾಸ ಅಕಾಡೆಮಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್    ತಿಳಿಸಿದರು.ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 14ರಂದು ಬೆಳಿಗ್ಗೆ 11 ಗಂಟೆಗೆ ಜರುಗಲಿರುವ ಕಾರ್ಯಕ್ರಮವನ್ನು ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ಉದ್ಘಾಟಿಸಲಿದ್ದು, ಹೈ.ಕ. ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಉಮಾಕಾಂತ  ನಿಗ್ಗುಡಗಿ ಮುಖ್ಯ ಅತಿಥಿಯಾಗಿರುವರು ಎಂದರು.

ಶಾಂತಾ ಪಸ್ತಾಪುರ ಬರೆದಿರುವ `ಪಯಣ~ ಕೃತಿಯನ್ನು ಖ್ಯಾತ ಕಲಾವಿದ ವಿ.ಜಿ. ಅಂದಾನಿ ಲೋಕಾರ್ಪಣೆ ಮಾಡಲಿದ್ದು, ಕರ್ನಾಟಕ ಲಲಿತಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಜೆ.ಎಸ್. ಖಂಡೇರಾವ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದರು.ಚೈತನ್ಯಮಯಿ ಆರ್ಟ್ ಗ್ಯಾಲರಿ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಈಗಿನಿಂದ ನಾಲ್ಕು ತಿಂಗಳ ಕಾಲ ಫೆ.24ರವರೆಗೆ ಹೈದರಾಬಾದ್ ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರ ಹಾಗೂ ಪ್ರಮುಖ ತಾಲ್ಲೂಕು ಕೇಂದ್ರಗಳಲ್ಲಿ ಚಿತ್ರಕಲಾ, ಮೂರ್ತಿ ಶಿಲ್ಪ ಪ್ರದರ್ಶನ, ಉಪನ್ಯಾಸ ಏರ್ಪಡಿಸಲಾಗುವುದು.ಫೆ. 24ರಂದು ನಗರದ ಚೈತನ್ಯಮಯಿ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ `ಚೈತನ್ಯ ಕಲಾ ಸೌರಭ~ ಸ್ಮರಣ ಸಂಚಿಕೆಯನ್ನು ಹೊರ ತರಲಾಗುವುದು ಎಂದು ಆರ್ಟ್ ಗ್ಯಾಲರಿ ನಿರ್ದೇಶಕ ಎ.ಎಸ್. ಪಾಟೀಲ ತಿಳಿಸಿದರು.ಬಿ.ಎಚ್. ನಿರಗುಡಿ, ಡಾ. ಸುಜಾತಾ ಪಾಟೀಲ, ಶಿವಕವಿ ಹಿರೇಮಠ ಜೋಗೂರ, ಜಿ.ಎಸ್. ಮಾಲಿಪಾಟೀಲ, ಸಿ.ಎಸ್. ಮಾಲಿಪಾಟೀಲ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry