ಗುರುವಾರ , ಫೆಬ್ರವರಿ 25, 2021
29 °C

ಚಿತ್ರಕಲಾ ಶಿಕ್ಷಕನ ಕೈಚಳಕ: ವರ್ಲಿ ಚಿತ್ರಕಲೆಯಲ್ಲಿ ಅರಳಿರುವ ಶಾಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರಕಲಾ ಶಿಕ್ಷಕನ ಕೈಚಳಕ: ವರ್ಲಿ ಚಿತ್ರಕಲೆಯಲ್ಲಿ ಅರಳಿರುವ ಶಾಲೆ

ಶಿಡ್ಲಘಟ್ಟ: ಒಂದಿಷ್ಟು ತ್ರಿಭುಜ, ಕೆಲವು ವೃತ್ತ. ಹಾಗೆಯೇ ಕೆಲವು ರೇಖೆ­ಗಳು.. ಇವಿಷ್ಟನ್ನು ಒಂದು ಹದದಲ್ಲಿ ಬೆರೆಸಿ­ದಾಗ ಕಣ್ಣ ಮುಂದೆ ಕೆಲವು ಜನರು ನಿಮ್ಮ ಮುಂದೆ ತಮ್ಮ ದಿನ ನಿತ್ಯದ ಚಟು­ವಟಿಕೆಗಳಲ್ಲಿ ತೊಡಗುವುದು ಕಂಡು­ಬರುತ್ತದೆ.ರೈತ ನೆಲವನ್ನು ಉಳುತ್ತಾನೆ. ಮಕ್ಕಳು ಆಟವಾಡುತ್ತಿರುತ್ತಾರೆ. ಒಂದೆಡೆ ಗುಡಿ­ಸಲಿನ ಮುಂದೆ ರಾಗಿ ಬೀಸುತ್ತಿದ್ದರೆ, ಮತ್ತೊಂದೆಡೆ ಹೊಲ ಉಳುತ್ತಿರುತ್ತಾರೆ. ಇಷ್ಟೆಲ್ಲ ಬಿಡಿಬಿಡಿಯಾಗಿ ನೋಡುವ ಹೊತ್ತಿಗೆ  ನಮ್ಮ ಮುಂದೆ ಸುಂದರ ದೃಶ್ಯ ಕಾವ್ಯ ಪ್ರಕಟವಾಗುತ್ತದೆ. ಗ್ರಾಮೀಣ ಜೀವನ ಕಣ್ಣ ಮುಂದೆ ಮೂಡಿ ಬರುತ್ತದೆ. ಸರಳವೂ ಮನಮೋಹಕವೂ ಆದ ಈ ಚಿತ್ತಾರಗಳ ಹೆಸರು ವರ್ಲಿ ಚಿತ್ರಗಳು.ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆಯ ಮೇಲೆ ಈ ಚಿತ್ರಗಳು ರಾರಾಜಿಸುತ್ತಿವೆ. ಸರ್ಕಾರಿ ಶಾಲೆಗಳು ನಿಯಮಪಾಲನೆಗಾಗಿ ಕೆಟ್ಟದಾಗಿ ಬಿಡಿಸಿದ ಚಿತ್ರಗಳಿಂದ ವಿಕಾರವಾಗಿ ಕಾಣುತ್ತದೆಂಬ ಮಾತುಗಳು ಕೇಳಿ

ಬರು­ತ್ತಿರುತ್ತವೆ. ಅಂಥದ್ದರಲ್ಲಿ ಕಲಾಪ್ರಕಾರ­ವನ್ನು ಶಾಲಾ ಗೋಡೆಗಳ ಮೇಲೆ ಬಿಂಬಿಸುವುದರೊಂದಿಗೆ ಅತ್ತ ಶಾಲೆಗೂ ಅಂದ, ಇತ್ತ ವಿದ್ಯಾರ್ಥಿಗಳಿಗೂ ಕಲೆಯ ಬಗ್ಗೆ ಅವಗಾಹನೆ ಮೂಡಿಸುತ್ತಿದ್ದಾರೆ ಶಿಕ್ಷಕರು.ಈ ಕಲೆಯನ್ನು ಚಿತ್ರಿಸಿದವರೂ ಶಿಕ್ಷಕರೇ ಆಗಿರುವುದು ವಿಶೇಷ. ಚಿಕ್ಕ­ಬಳ್ಳಾಪುರ ತಾಲ್ಲೂಕಿನ ಗಿಡ್ನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕ ನಾಗರಾಜ್‌ ಅವರು ಈ ಚಿತ್ರಗಳನ್ನು ಬಿಡಿಸಿದ್ದಾರೆ. ಹಣವನ್ನು ಬಯಸದೆ ಕೇವಲ ತಮ್ಮ ಸ್ನೇಹಿತರಾದ ಚೀಮಂಗಲದ ಶಿಕ್ಷಕರ ಒತ್ತಾಸೆಯಿಂದ ಈ ಚಿತ್ರಗಳನ್ನು ಬಿಡಿಸಿದ ಅವರನ್ನು ಶಾಲೆಯವರು ಗೌರವಿಸಿದ್ದಾರೆ.ವರ್ಲಿ ಚಿತ್ರಗಳು ಹೆಸರೇ ಸೂಚಿಸು­ವಂತೆ  ಮಹಾರಾಷ್ಟ್ರದ ವರ್ಲಿ ಬುಡ­ಕಟ್ಟು ಜನಾಂಗದವರು ತಮ್ಮ ಗುಡಿ­ಸಲುಗಳ ಮೇಲೆ ಬಿಡಿಸುವ ಚಿತ್ರಗಳು. ಸಾಂಪ್ರದಾಯಿಕ ರೀತಿಯಲ್ಲಿ ಅವರು ಸೆಗಣಿ, ಕೆಮ್ಮಣ್ಣಿನ ಹಿನ್ನೆಲೆಗೆ ಅಕ್ಕಿಯ ಹಿಟ್ಟಿನಲ್ಲಿ ಅದ್ದಿದ ಕುಂಚದಿಂದ ಇವುಗಳನ್ನು ಬಿಡಿಸುತ್ತಾರೆ.ಈ ಜನರು ಬಹಳ ಸರಳವಾದ ಜೀವನವನ್ನು ನಡೆಸುತ್ತಾರೆ. ಅವರು ಪ್ರಕೃತಿ ಆರಾಧಕರು. ಅವರ ಚಿತ್ರ­ಗಳಲ್ಲಿನ ತ್ರಿಕೋನಗಳಿಗೆ ಬೆಟ್ಟ ಗುಡ್ಡಗಳೇ ಪ್ರೇರಣೆ. ವೃತ್ತಗಳು ಸೂರ್ಯ– ಚಂದ್ರ­ನಿಂದ ಪ್ರಭಾವಿತ­ವಾದ ಆಕೃತಿಗಳು. ಸಾಮಾನ್ಯವಾಗಿ ಕೃಷಿ ಇವರ ಪ್ರಮುಖ ಉದ್ಯೋಗ.ಚಿತ್ರಗಳಲ್ಲಿ ಕೃಷಿಯ ಹಲವು ಹಂತ­ಗಳಾದ ಬಿತ್ತುವಿಕೆ, ಫಸಲಿನ ಕೊಯಿಲು ಇತ್ಯಾದಿಗಳನ್ನು ಹೇರಳವಾಗಿ ಕಾಣ­ಬಹುದು. ಬೇಟೆ, ಹಬ್ಬದ ಆಚರಣೆ­ಗಳು, ಪ್ರಕೃತಿ, ನೃತ್ಯ, ವಿನೋದ ಮುಂತಾದ ಚಿತ್ತಾರಗಳೂ ಕಾಣಬರು­ತ್ತವೆ.ಸೆಗಣಿ ಅಥವಾ ಕೆಮ್ಮಣ್ಣಿನ ಹಿನ್ನೆಲೆಗೆ ಬದಲಾಗಿ ಆ ಬಣ್ಣದ ಪೇಂಟುಗಳು ಬಳಕೆಯಾಗುತ್ತಿವೆ. ಅಕ್ಕಿ ಹಿಟ್ಟಿಗೆ ಬದಲಾಗಿ ಬಿಳಿಯ ಅಕ್ರಲಿಕ್ ವರ್ಣಗಳ ಬಳಕೆಯಾಗುತ್ತಿದೆ.‘ಮಕ್ಕಳಿಗೂ ಇಂಥ ಕಲೆಯ ಬಗ್ಗೆ ತಿಳುವಳಿಕೆ ನೀಡಬೇಕು. ಮಕ್ಕಳು ಕಲೆಯ ಬಗ್ಗೆ ಅಭಿರುಚಿಯನ್ನು ಬೆಳೆಸಿಕೊಳ್ಳಲಿ ಎಂಬ ಆಸೆಯಿಂದ ನಾವು ಚಿತ್ರಕಲಾ ಶಿಕ್ಷಕ ನಾಗರಾಜ್‌ ಅವರನ್ನು ಕೇಳಿದೆವು. ಯಾವ ಫಲಾಪೇಕ್ಷೆ­ಯಿಲ್ಲದೆ ಅವರು ಚಿತ್ರಗಳನ್ನು ಬಿಡಿಸಿ­ಕೊಟ್ಟಿದ್ದಾರೆ’ ಎಂದು ಚೀಮಂಗಲ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಎಸ್‌.ಶಿವಶಂಕರ್‌

ತಿಳಿಸಿ­ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.