ಮಂಗಳವಾರ, ಜೂನ್ 15, 2021
21 °C

ಚಿತ್ರದುರ್ಗ ಜಾನಪದ ಶ್ರೀಮಂತಿಕೆಯ ಜಿಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಜಾನಪದದಲ್ಲಿ ಅತ್ಯಂತ ಶ್ರೀಮಂತವಾಗಿರುವುದು ಚಿತ್ರದುರ್ಗ ಜಿಲ್ಲೆ. ಇಲ್ಲಿನ ಬುಡಕಟ್ಟುಗಳು ಈ ಜಿಲ್ಲೆಯನ್ನು ಜಾನಪದದ ಶ್ರೀಮಂತಿಕೆಯನ್ನು ಹೆಚ್ಚಿಸಿವೆ ಎಂದು ಸರ್ಕಾರಿ ಕಲಾ ಕಾಲೇಜಿನ ಕನ್ನಡ ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥ ಡಾ.ಲೋಕೇಶ್ ಅಗಸನಕಟ್ಟೆ ತಿಳಿಸಿದರು.ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಶನಿವಾರ ಆಯೋಜಿಸಿದ್ದ ಜಾನಪದ ತಜ್ಞ ಪ್ರಶಸ್ತಿ ಪುರಸ್ಕೃತರ ಕೃತಿಗಳ ಕುರಿತ ಚಿಂತನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ತಜ್ಞ ಪ್ರಶಸ್ತಿ ವಿಭಾಗದಲ್ಲಿ ಡಾ.ಜೀಶಂಪ ಪ್ರಶಸ್ತಿಗೆ ಆಯ್ಕೆಯಾಗಿರುವ ಡಾ.ಮೀರಸಾಬಿಹಳ್ಳಿ ಶಿವಣ್ಣ ಅವರ ಕೃತಿಗಳ ಕುರಿತು ಮಾತನಾಡಿದ ತುಮಕೂರಿನ ಎಂಪ್ರೆಸ್ ಬಾಲಕಿಯರ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಜಿ.ವಿ. ಆನಂದಮೂರ್ತಿ, ಶಿವಣ್ಣ ಹುಟ್ಟಿದ ನಾಡಿನ, ನೆಲದ ಋಣ ತೀರಿಸಿದ್ದಾರೆ. ಅವರ ಕೃತಿಗಳು ಪುಟ್ಟ ಭುವನಕೋಶವಾಗಿವೆ ಎಂದರು. ಜನಪದ ಎಂ.ಎ. ಪದವಿ ಪಡೆದವರನ್ನು ಸಹ ಉಪನ್ಯಾಸಕರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಆಧುನಿಕ ತಂತ್ರಜ್ಞಾನವನ್ನು ಜಾನಪದದ ಬೆಳವಣಿಗೆಗೆ ಅಳವಡಿಸಿಕೊಳ್ಳುವುದು ಅಗತ್ಯವಿದೆ ಮತ್ತು ಜಿಲ್ಲಾವಾರು ಜಾನಪದ ಕಲಾವಿದರ ಮಾಹಿತಿ ಕೋಶ ಆರಂಭಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.ಡಾ.ಬಿ.ಎಸ್. ಗದ್ದಗಿಮಠ ಪ್ರಶಸ್ತಿಗೆ ಆಯ್ಕೆಯಾಗಿರುವ ಪ್ರೊ.ಸೂಗಯ್ಯ ಹಿರೇಮಠ ಅವರ ಕೃತಿಗಳ ಕುರಿತು ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಬಸವರಾಜ ಪೊಲೀಸ ಪಾಟೀಲ ಮಾತನಾಡಿದರು.

ಜಾನಪದ ಅಕಾಡೆಮಿ ಅಧ್ಯಕ್ಷ ಗೊ.ರು. ಚನ್ನಬಸಪ್ಪ, ಡಾ.ಮೀರಸಾಬಿಹಳ್ಳಿ ಶಿವಣ್ಣ, ಪ್ರೊ.ಸೂಗಯ್ಯ ಹಿರೇಮಠ, ಡಾ.ಮೈಲಹಳ್ಳಿ ರೇವಣ್ಣ, ರಿಜಿಸ್ಟ್ರಾರ್ ಬಿ.ಎನ್. ಪರಡ್ಡಿ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.