ಚಿತ್ರದುರ್ಗ: ಜಿ.ಪಂ. ಸಾಮಾನ್ಯ ಸಭೆಗೆ ಸದಸ್ಯರ ಬಹಿಷ್ಕಾರ

ಮಂಗಳವಾರ, ಜೂಲೈ 23, 2019
24 °C

ಚಿತ್ರದುರ್ಗ: ಜಿ.ಪಂ. ಸಾಮಾನ್ಯ ಸಭೆಗೆ ಸದಸ್ಯರ ಬಹಿಷ್ಕಾರ

Published:
Updated:

ಚಿತ್ರದುರ್ಗ: ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವರ್ಗಾವಣೆಗೆ ಒತ್ತಾಯಿಸಿ ಜಿ.ಪಂ ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿದ ಘಟನೆ ಶುಕ್ರವಾರ ಇಲ್ಲಿ ನಡೆದಿದೆ.ಜಿಲ್ಲಾ ಪಂ. ಸಿಇಒ ರಂಗೇಗೌಡ ಅವರನ್ನು ಕೂಡಲೇ ವರ್ಗಾಯಿಸಬೇಕು. ಅಲ್ಲಿವರೆಗೆ ಯಾವುದೇ ಅಭಿವೃದ್ಧಿ ಕಾರ್ಯದಲ್ಲಿ ತಾವು ಪಾಲ್ಗೊಳ್ಳುವುದಿಲ್ಲ. ಎಲ್ಲವೂ ಅಧಿಕಾರಿಗಳ ಹಿಡಿತದಲ್ಲಿದೆ. ಸಿಇಒ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಸಭೆ ಆರಂಭವಾಗುತ್ತಿದ್ದಂತೆಯೇ ಸದಸ್ಯರು ಬಹಿಷ್ಕಾರ ಹಾಕಿ ಹೊರನಡೆದರು.ನಾನು ಸರ್ಕಾರದ ಆದೇಶ ಮತ್ತು ನಿಯಮಗಳನ್ನು ಪಾಲಿಸಿದ್ದೇನೆ. ಎಲ್ಲ ಕಡತ ಮತ್ತು ವಿಷಯಗಳನ್ನು ಅಧ್ಯಕ್ಷರ ಗಮನಕ್ಕೆ ತರಲಾಗಿದೆ. ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಸಿಇಒ ರಂಗೇಗೌಡ ಪ್ರಜಾವಾಣಿಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry