ಬುಧವಾರ, ಮೇ 12, 2021
19 °C

ಚಿತ್ರದುರ್ಗ: ಸಿಡಿಲಿಗೆ ಎತ್ತುಗಳು ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ:ನಗರ ಮತ್ತು ಜಿಲ್ಲೆಯ ವಿವಿಧೆಡೆ ಶನಿವಾರ ಸಂಜೆ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಿದೆ. ಸಿಡಿಲು ಬಡಿದು ನಾಯಕನಹಟ್ಟಿ ಸಮೀಪದ ಗ್ಯಾಗನಾರಹಟ್ಟಿ ಬಳಿ ಎರಡು ಎತ್ತುಗಳು ಮೃತಪಟ್ಟಿವೆ.

ತಾ.ಪಂ. ಮಾಜಿ ಸದಸ್ಯ ಎಸ್. ಓಬಯ್ಯ  ಈ ಎತ್ತುಗಳನ್ನು ಕಳೆದ ತಿಂಗಳಷ್ಟೇ ಖರೀದಿಸಿದ್ದರು.ಹೊಳಲ್ಕೆರೆ ತಾಲ್ಲೂಕಿನ ಎನ್.ಜಿ.ಹಳ್ಳಿ, ಸಾಂತೇನಹಳ್ಳಿ ಮತ್ತಿತರ ಸ್ಥಳಗಳಲ್ಲಿ ಮಳೆಯಾಗಿದೆ. ಗಾಳಿಗೆ ಆವಿನಹಟ್ಟಿ ಸಮೀಪ ಮೂರು ವಿದ್ಯುತ್ ಕಂಬಗಳು ಬಿದ್ದಿವೆ.ದಾವಣಗೆರೆ ವರದಿ: ಜಿಲ್ಲೆಯಲ್ಲಿ ಶುಕ್ರವಾರ ಬೀಸಿದ ಗಾಳಿ-ಮಳೆಯಿಂದಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆ ನಷ್ಟವಾಗಿದೆ.ಕಂದಾಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಶನಿವಾರ ನಡೆಸಿದ ಸಮೀಕ್ಷೆ  ಪ್ರಕಾರ ದಾವಣಗೆರೆ ತಾಲ್ಲೂಕಿನ ಆನಗೋಡು ಹೋಬಳಿಯ ಹೆಮ್ಮನಬೇತೂರು, ದ್ಯಾಮವ್ವನಹಳ್ಳಿ, ಚಿಕ್ಕವ್ವನಾಗ್ತಿಹಳ್ಳಿ ಗ್ರಾಮಗಳಲ್ಲಿ ಬಾಳೆ ನೆಲಕಚ್ಚಿದ್ದು ರೂ 90 ಲಕ್ಷದಷ್ಟು ನಷ್ಟ ಉಂಟಾಗಿದೆ.  

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.