ಭಾನುವಾರ, ಮೇ 9, 2021
28 °C

ಚಿದಂಬರಂ ವಿರುದ್ಧ ಸುಬ್ರಮಣಿಯನ್‌ಸ್ವಾಮಿ ಹೊಸ ಆಪಾದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಚಿದಂಬರಂ ಅವರು 2006ರಲ್ಲಿ ಹಣಕಾಸು ಸಚಿವರಾಗಿದ್ದಾಗ ತಮ್ಮ ಪುತ್ರ ಕಾರ್ತಿಕ್ ಅವರಿಗೆ ಆರ್ಥಿಕ ಲಾಭವಾಗಬೇಕು ಎಂಬ ಒಂದೇ ಉದ್ದೇಶದಿಂದ ಮಲೇಷ್ಯಾ ಮೂಲದ ಮ್ಯಾಕ್ಸಿಸ್ ಕಂಪೆನಿಗೆ ಏರ್‌ಸೆಲ್ ಮಾರಾಟ ಮಾಡಲು ಅನುಮತಿ ನೀಡುವುದಕ್ಕೆ ವಿಳಂಬ ಮಾಡಿದ್ದರು ಎಂದು ಜನತಾ ಪಕ್ಷದ ಮುಖಂಡ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಹೊಸ ಆಪಾದನೆ ಮಾಡಿದ್ದಾರೆ.

ಏರ್‌ಸೆಲ್ ಮತ್ತು ಮ್ಯಾಕ್ಸಿಸ್ ಮಾರಾಟ ಹಗರಣದಲ್ಲಿ ಚಿದಂಬರಂ ಮತ್ತು ಅವರ ಪುತ್ರನ ವಿರುದ್ಧ ಎಫ್‌ಐಆರ್ ಸಲ್ಲಿಸುವಂತೆ ಸಿಬಿಐಗೆ ಸೂಚಿಸಬೇಕು ಮತ್ತು ಚಿದಂಬರಂ ಅವರ ರಾಜೀನಾಮೆ ಪಡೆಯಬೇಕು ಎಂದು ಸ್ವಾಮಿ ಅವರು ಪ್ರಧಾನಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಪ್ರಧಾನಿ ಅವರು ಕ್ರಮ ತೆಗೆದುಕೊಳ್ಳದಿದ್ದರೆ ಸೂಕ್ತ ನಿರ್ದೇಶನ ನೀಡುವಂತೆ ತಾವು ಕೋರ್ಟ್ ಮೊರೆ ಹೋಗುವುದಾಗಿ ಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.