ಬುಧವಾರ, ಮೇ 12, 2021
26 °C

ಚಿನಕುರಳಿ ಬಳಿ ಅಪಘಾತ: 6 ಸಾವು, 51 ಜನರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ನಿಶ್ಚಿತಾರ್ಥ ಸಮಾರಂಭಕ್ಕೆ ಮೈಸೂರಿನಿಂದ ಕೆ.ಆರ್.ಪೇಟೆಗೆ ಹೋಗುತ್ತಿದ್ದ ಟೆಂಪೊ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಟ್ಟು 6 ಮಂದಿ ಮೃತಪಟ್ಟಿರುವ ಘಟನೆ ಗುರುವಾರ ಪಾಂಡವಪುರ ತಾಲ್ಲೂಕು ಚಿನಕುರಳಿ ಗ್ರಾಮದ ಬಳಿ ಸಂಭವಿಸಿದೆ.ಅಪಘಾತದ ರಭಸಕ್ಕೆ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಪಾಂಡವಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. 13 ಮಂದಿಗೆ ತೀವ್ರ ಸ್ವರೂಪದಲ್ಲೂ, 38 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಮೃತರನ್ನು ಮೈಸೂರಿನ ಮಂಡಿಮೊಹಲ್ಲಾ ನಿವಾಸಿಗಳಾದ ಅಪ್ಪುಸ್ವಾಮಿ (60), ಕುಮಾರ (30), ರೋಹಿತ್ (4), ರೋಷನ್ (3) ಎಂದು ಗುರುತಿಸಲಾಗಿದ್ದು, ಇನ್ನಿಬ್ಬರ ಹೆಸರು ತಿಳಿದುಬಂದಿಲ್ಲ.ತೀವ್ರವಾಗಿ ಗಾಯಗೊಂಡವರನ್ನು ಮೈಸೂರು ಮತ್ತು ಪಾಂಡವಪುರದ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ. ಸಣ್ಣಪುಟ್ಟ ಪೆಟ್ಟಾಗಿರುವವರಿಗೆ ಚಿನಕುರಳಿ ಸಾರ್ವಜನಿಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆ ವಿವರ: ಕೆ.ಆರ್.ಪೇಟೆ ತಾಲ್ಲೂಕಿನ ಕುಂದನಹಳ್ಳಿ ಗ್ರಾಮಕ್ಕೆ ನಿಶ್ಚಿತಾರ್ಥಕ್ಕೆ ಹೋಗುತ್ತಿದ್ದಾಗ ಚಿನಕುರಳಿ ಗ್ರಾಮದ ಬಳಿ ಸುಮಾರು ಮಧ್ಯಾಹ್ನ 12.30ರಲ್ಲಿ ಟೆಂಪೊ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಈ ಅವಘಡ ಸಂಭವಿಸಿದೆ. ಮೃತಪಟ್ಟವರೆಲ್ಲಾ ಒಂದೇ ಕುಟುಂಬಕ್ಕೆ ಸೇರಿದ್ದಾರೆ ಎನ್ನಲಾಗಿದೆ.ನಿಶ್ಚಿತಾರ್ಥವಾಗಬೇಕಿದ್ದ ಮದುಮಗ ಪ್ರತ್ಯೇಕ ವಾಹನದಲ್ಲಿ ತೆರಳುತ್ತಿದುದ್ದರಿಂದ, ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಸಂಬಂಧ ಚಿನಕುರಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.