ಬುಧವಾರ, ಮೇ 25, 2022
31 °C

ಚಿನ್ನದ ಸರ ದೋಚಿದ ದುಷ್ಕರ್ಮಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಮಂಗಳವಾರ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ದುಷ್ಕರ್ಮಿಗಳು ಮೂವರು ಮಹಿಳೆಯರ ಚಿನ್ನದ ಸರಗಳನ್ನು ದೋಚಿದ್ದಾರೆ.ಬೈಕ್‌ನಲ್ಲಿ ಬಂದ ದುಷ್ಕರ್ಮಿ, ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವಿನುತಾ ಎಂಬುವರ 40 ಗ್ರಾಂ ತೂಕದ  ಸರ ದೋಚಿರುವ ಘಟನೆ ಸದಾಶಿವನಗರದಲ್ಲಿ ನಡೆದಿದೆ.

 

ಆರ್.ಟಿ.ನಗರದ ವಿನುತಾ ಸದಾಶಿವನಗರದಲ್ಲಿರುವ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದಾರೆ. ಶಾಲೆಗೆ ಹೋಗುವಾಗ ಅವರ ವಾಹನವನ್ನು ಬೈಕ್‌ನಲ್ಲಿ ಹಿಂಬಾಲಿಸಿದ ದುಷ್ಕರ್ಮಿ, ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಚನ್ನಮ್ಮನ ಕೆರೆ ಅಚ್ಚುಕಟ್ಟು: ಸ್ನೇಹಿತೆಯ ಮನೆಗೆ ಹೋಗುತ್ತಿದ್ದ ಉಮಾ ಎಂಬುವರಿಂದ 40 ಗ್ರಾಂ ತೂಕದ ಚಿನ್ನದ ಸರ ದೋಚಿದ ಘಟನೆ ಬನಶಂಕರಿ 30ನೇ ಅಡ್ಡರಸ್ತೆಯಲ್ಲಿ ನಡೆದಿದೆ. ಬನಶಂಕರಿಯ 23ನೇ ಅಡ್ಡರಸ್ತೆ ನಿವಾಸಿ ಉಮಾ ಸ್ನೇಹಿತೆಯ ಮನೆಗೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಸರ ದೋಚಿದ್ದಾರೆ. ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಾಣಸವಾಡಿ: ವಾಯುವಿಹಾರಕ್ಕೆಂದು ಮನೆ ಸಮೀಪದ ಉದ್ಯಾನಕ್ಕೆ ಹೋಗುತ್ತಿದ್ದ ರೇಷ್ಮಾ ಅವರಿಂದ ದುಷ್ಕರ್ಮಿಗಳು 17 ಗ್ರಾಂ ತೂಕದ ಚಿನ್ನದ ಸರ ದೋಚಿದ್ದಾರೆ. ಲಿಂಗರಾಜಪುರ ಸಮೀಪದ ಕೆಎಸ್‌ಎಫ್‌ಸಿ ಲೇಔಟ್ ಬಳಿ ಹೋಗುವಾಗ ಇಬ್ಬರು ಅಪರಿಚಿತರು ಬೈಕ್‌ನಲ್ಲಿ ಬಂದು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.