ಮಂಗಳವಾರ, ಜೂನ್ 22, 2021
28 °C

ಚಿನ್ನ– ಬೆಳ್ಳಿ ವರ್ತಕರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನರಾಯಪಟ್ಟಣ: ನುಗ್ಗೇಹಳ್ಳಿಯಲ್ಲಿ ಚಿನ್ನ– ಬೆಳ್ಳಿ ವ್ಯಾಪಾರಿಯನ್ನು ಗುಂಡು ಹಾರಿಸಿ ಕೊಲೆ ಮಾಡಿದ ದುಷ್ಕರ್ಮಿ­ಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಚಿನ್ನ– ಬೆಳ್ಳಿ ವರ್ತಕರು ಅಂಗಡಿಗಳನ್ನು ಬಂದ್‌ ಮಾಡಿ ಮಂಗಳವಾರ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿದರು.ಪಟ್ಟಣದ  ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾ­ಕಾರರು ಮಿನಿ ವಿಧಾನಸೌಧದ ಆವರಣದಲ್ಲಿ ಸೇರಿದರು.

ನುಗ್ಗೇಹಳ್ಳಿಯಲ್ಲಿ ಸೋಮವಾರ ಸಂಜೆ ಕಾಳಿಕಾಂಬ ಜ್ಯುವೆಲರ್ಸ್‌ ಮಾಲೀಕ ಪರಮೇಶ್‌ ಅವರನ್ನು ಗುಂಡಿಕ್ಕಿ ಕೊಂದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಘಟನೆಯಿಂದ ಚಿನ್ನ– ಬೆಳ್ಳಿ ವರ್ತಕರು ಭಯದ  ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ವ್ಯಾಪಾರಿಗಳಿಗೆ ಸೂಕ್ತರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.ಘಟನೆಗೆ ಕಾರಣರಾದ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು. ಇಂಥ ಘಟನೆ ಮರುಕಳಿಸದಂತೆ ಕ್ರಮ ತೆಗೆದುಕೊಳ್ಳಬೇಕು ಎಂದರು. ತಹಶೀಲ್ದಾರ್‌ ಕೆ. ಕೃಷ್ಣ ಅವರಿಗೆ ಮನವಿ ಸಲ್ಲಿಸಲಾಯಿತು.ವರ್ತಕರ ಸಂಘದ ಪದಾಧಿಕಾರಿಗಳಾದ ಸಿ.ಎಂ. ಹರೀಶ್‌, ಮಂಜೇಗೌಡ, ಸಂಜಯ್‌ಸೇಟ್‌, ನಾಗೇಂದ್ರ, ನಟರಾಜ್‌ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.