ಶನಿವಾರ, ಮೇ 8, 2021
18 °C

ಚಿನ್ನ: ಆಮದು ನಿಯಂತ್ರಣಕ್ಕೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಬ್ಯಾಂಕುಗಳಲ್ಲಿ  ಚಿನ್ನದ ನಾಣ್ಯ ಮಾರಾಟಕ್ಕೆ ನಿಷೇಧ ಹೇರುವುದೂ ಸೇರಿದಂತೆ ಚಿನ್ನದ ಆಮದು ನಿಯಂತ್ರಿಸಲು ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವುದಾಗಿ ಹಣಕಾಸು ಸಚಿವಾಲಯ ಹೇಳಿದೆ.ಚಿನ್ನ ಆಮದು-ರಫ್ತು ನೀತಿಗೆ ತಿದ್ದುಪಡಿ ತರಲಾಗುವುದು. ಅಗತ್ಯ ಬಿದ್ದರೆ ಬ್ಯಾಂಕುಗಳ ಮೂಲಕ ಚಿನ್ನದ ನಾಣ್ಯ ಮಾರಾಟಕ್ಕೆ ನಿಷೇಧ ಹೇರಲಾಗುವುದು ಎಂದು ವಾಣಿಜ್ಯ ವ್ಯವಹಾರಗಳ ಕಾರ್ಯದರ್ಶಿ ಅರವಿಂದ್ ಮಯರಾಂ ಸೋಮವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.ಪ್ರಸಕ್ತ ಏಪ್ರಿಲ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಆಮದು ಶೇ 138ರಷ್ಟು ಹೆಚ್ಚಿದ್ದು 750 ಕೋಟಿ ಡಾಲರ್‌ಗಳಿಗೆ ಏರಿಕೆ ಕಂಡಿದೆ. ಇದರಿಂದ ದೇಶದ ವ್ಯಾಪಾರ ಕೊರತೆ ಅಂತರವು 1,780 ಕೋಟಿ ಡಾಲರ್‌ಗಳಷ್ಟಾಗಿದೆ ಎಂದು ಅವರು ಹೇಳಿದರು. ಕಚ್ಚಾ ತೈಲ ಮತ್ತು ಚಿನ್ನದ ಆಮದು ಹೆಚ್ಚಳದಿಂದ ಚಾಲ್ತಿ ಖಾತೆ ಕೊರತೆಯು (ಸಿಎಡಿ) ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ದಾಖಲೆ ಮಟ್ಟವಾದ `ಜಿಡಿಪಿ'ಯ ಶೇ 6.7ಕ್ಕೆ ಏರಿಕೆ ಕಂಡಿದೆ. ಒಟ್ಟಾರೆ 2012-13ನೇ ಸಾಲಿನಲ್ಲಿ 830 ಟನ್‌ಗಳಷ್ಟು ಚಿನ್ನ ಆಮದು ಮಾಡಿಕೊಳ್ಳಲಾಗಿದೆ ಎಂದರು.ಕಳೆದ ತಿಂಗಳು `ಆರ್‌ಬಿಐ' ಚಿನ್ನದ ಆಮದಿಗೆ ಸಂಬಂಧಿಸಿದಂತೆ ಬ್ಯಾಂಕುಗಳ ಮೇಲೆ ನಿರ್ಬಂಧ ಹೇರಿತ್ತು. ಗೋಲ್ಡ್ ಇಟಿಎಫ್ ಮತ್ತು ಚಿನ್ನದ ನಾಣ್ಯಗಳ ಮೇಲೆ ಸಾಲ ನೀಡುವ ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೂ ಕೆಲವು ಷರತ್ತು ವಿಧಿಸಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.