ಸೋಮವಾರ, ಮೇ 23, 2022
21 °C

ಚಿಲ್ಲರ್ಗಿಯಲ್ಲಿ ಗಡಿನಾಡ ಉತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಏಪ್ರಿಲ್ 6 ಮತ್ತು 7 ರಂದು ಬೀದರ್ ತಾಲೂಕಿನ ಚಿಲ್ಲರ್ಗಿ ಗ್ರಾಮದಲ್ಲಿ ಗಡಿನಾಡ ಉತ್ಸವ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಡಿನಾಡ ಉತ್ಸವ ಆಚರಣೆ ಕುರಿತು ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.ಗಡಿನಾಡ ಉತ್ಸವದ ಅಂಗವಾಗಿ ಮೆರವಣಿಗೆ ಆಯೋಜಿಸಲಾಗುವುದು. ಮೆರವಣಿಗೆಯಲ್ಲಿ ಕಲಾತಂಡಗಳು, ಸಿಂಗರಿಸಿದ ಎತ್ತಿನ ಬಂಡಿಗಳು, ಗ್ರಾಮೀಣ ಸಂಸ್ಕತಿ, ಕಲೆಯನ್ನು ಪ್ರದರ್ಶಿಸುವ ಕಾರ್ಯಕ್ರಮಗಳನ್ನು ಪ್ರದರ್ಶಿಸಲಾಗುವುದು. ಸ್ವಸಹಾಯ ಗುಂಪಿನ ಸದಸ್ಯರು ಮೆರವಣಿಗೆಯಲ್ಲಿ ಭಾಗವಹಿಸುವರು ಎಂದು ಹೇಳಿದರು.ಎರಡನೇ ದಿನ ಎರಡು ಗೋಷ್ಠಿಗಳನ್ನು ಆಯೋಜಿಸಲಾಗುವುದು. ಜಿಲ್ಲೆಯ ಕವಿಗಳಿಗಾಗಿ ಬಹುಭಾಷಾ ಕವಿಗೋಷ್ಠಿ ಏರ್ಪಡಿಸಲಾಗುವುದು. ಎರಡು ದಿನಗಳ ಕಾಲ ವೈವಿಧ್ಯಮಯ ಸಾಂಸ್ಕತಿಕ ಕಾರ್ಯಕ್ರಮಗಳು ನಡೆಯಲಿವೆ. ಇದರಲ್ಲಿ ಸ್ಥಳೀಯ ಸಂಸ್ಕತಿಯನ್ನು ಪ್ರತಿಬಿಂಬಿಸುವ ಜಾನಪದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಸ್ಥಳೀಯ ಕಲಾವಿದರಿಗೆ ಪ್ರಾತಿನಿಧ್ಯ ನೀಡಲಾಗುವುದು ಎಂದು ತಿಳಿಸಿದರು.ಸ್ಪರ್ಧೆ: ಉತ್ಸವದ ಅಂಗವಾಗಿ ಸ್ಥಳೀಯ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಹಾಡು, ನೃತ್ಯ, ರೂಪಕಗಳನ್ನು ಪ್ರದರ್ಶಿಸಲು ಐದು ನಿುಷ ಸಮಯವಕಾಶ ಕಲ್ಪಿಸಲಾಗುವುದು. ಹಾಡು, ನೃತ್ಯ ಜಾನಪದ, ಸಾಂಸ್ಕತಿಕ ಹಿನ್ನೆಲೆಯಿಂದ ಕೂಡಿರಬೇಕು. ಸಿನೆಮಾ ಹಾಡುಗಳಿಗೆ ಅವಕಾಶ ನೀಡಲಾಗುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸ ಬಯಸುವವರು ಮಾ. 28ರ ಒಳಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕತಿ ಇಲಾಖೆ, ಬೀದರ್ ಇವರಲ್ಲಿ ಹೆಸರು ನೋಂದಾಯಿಸಬೇಕು ಎಂದು ಹೇಳಿದರು.ಗಡಿನಾಡ ಉತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟ ಹಮ್ಮಿಕೊಳ್ಳಲಾಗುವುದು. ಕೊಕ್ಕೋ, ಕಬಡ್ಡಿ, ಕುಸ್ತಿ ಪಂದ್ಯಾವಳಿಗಳು ನಡೆಯಲಿದ್ದು, ಏಪ್ರಿಲ್ 4 ಮತ್ತು 5 ರಂದು ಪ್ರಥಮ ಹಂತದ ಪಂದ್ಯಾವಳಿಗಳು ನಡೆಯಲಿವೆ. ಕ್ರೀಡೆಗಳಲ್ಲಿ ಭಾಗವಹಿಸುವವರು ಸ್ಥಳದಲ್ಲಿಯೇ ತಮ್ಮ ಹೆಸರು ನೋಂದಾಯಿಸಹುದಾಗಿದೆ. ಉತ್ಸವದಲ್ಲಿ ಭಾಗವಹಿಸುವ ಗ್ರಾಮಸ್ಥರಿಗೆ ಎರಡು ದಿನಗಳ ಕಾಲ ರಾತ್ರಿಯ ಊಟಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.ಉತ್ಸವದ ವೇದಿಕೆ ಸ್ಥಳೀಯ ಜಾನಪದ ಸೊಗಡನ್ನು ಪ್ರತಿಬಿಂಬಿಸುವಂತಿರಬೇಕು. ಉತ್ಸವದ ಯಶಸ್ವಿ ಆಯೋಜನೆಗಾಗಿ ಗ್ರಾಮದಲ್ಲಿ ಸಭೆ ಕರೆದು ಸಮಿತ್ನಿ ರಚಿಸುವಂತೆ ಸೂಚನೆ ನೀಡಿದರು.ಸಹಾಯಕ ಆಯುಕ್ತರಾದ ಖುಷ್ಬು ಗೋಯಲ್ ಮತ್ತಿತರ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.