ಬುಧವಾರ, ಜನವರಿ 22, 2020
28 °C

ಚೀನಾದಲ್ಲಿ ಬೆಂಕಿ ಅವಘಡ: 93 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀಜಿಂಗ್ (ಐಎಎನ್‌ಎಸ್) ಚೀನಾದ ಮಿಶಾಜಿ ಪಟ್ಟದಲ್ಲಿನ ಪೌಲ್ಟ್ರಿ ಫಾರಂವೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ 93 ಕಾರ್ಮಿಕರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಪೌಲ್ಟ್ರಿ ಫಾರಂನಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ನೂರಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಮಿಶಾಜಿ ಪಟ್ಟಣದ ಪೊಲೀಸರು ತಿಳಿಸಿದ್ದಾರೆ.ಘಟನೆಯಲ್ಲಿ ನೂರಕ್ಕೂ ಹೆಚ್ಚು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೌಲ್ಟ್ರಿ ಫಾರಂನಲ್ಲಿ ಸುಮಾರು 300 ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.ಬೆಂಕಿ ಅನಾಹುತಕ್ಕೆ ನಿಖರ ಕಾರಣವೇನೆಂಬುದು ತಿಳಿದುಬಂದಿಲ್ಲ.

ಪ್ರತಿಕ್ರಿಯಿಸಿ (+)