ಚೀನಾ ಚಟುವಟಿಕೆಗೆ ಮೇಲೆ ನಿಗಾ: ಆಂಟನಿ

7

ಚೀನಾ ಚಟುವಟಿಕೆಗೆ ಮೇಲೆ ನಿಗಾ: ಆಂಟನಿ

Published:
Updated:

ನವದೆಹಲಿ (ಪಿಟಿಐ): ರಾಷ್ಟ್ರದ ಆರ್ಥಿಕ ಹಾಗೂ ರಕ್ಷಣೆಯ ಹಿತದೃಷ್ಟಿಯಿಂದ ಚೀನಾದ ಎಲ್ಲ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ ಎಂದು ರಕ್ಷಣಾ ಸಚಿವ ಎ.ಕೆ.ಆಂಟನಿ ಸೋಮವಾರ ಲೋಕಸಭೆಗೆ ತಿಳಿಸಿದರು.ಚೀನಾ `ಅಕ್ಸಯ್ ಚಿನ್' ಪ್ರದೇಶದಲ್ಲಿ ದಕ್ಷಿಣ ಕೋರಿಯಾ ಮತ್ತು ಜಪಾನ್ ನೆರವಿನಿಂದ ಖಗೋಳ ವೀಕ್ಷಣಾಲಯವನ್ನು ಸ್ಥಾಪಿಸುತ್ತಿರುವ ಕುರಿತು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆಂಟನಿ ಅವರು, `ಆರ್ಥಿಕ ಹಾಗೂ ರಕ್ಷಣೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ' ಎಂದು ಪ್ರತಿಕ್ರಿಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry