ಗುರುವಾರ , ಏಪ್ರಿಲ್ 15, 2021
22 °C

ಚುನಾವಣಾ ಅಕ್ರಮ ತಡೆಗೆ ವಿಚಕ್ಷಣಾ ಪಡೆ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ:  ಕ್ಷೇತ್ರದಲ್ಲಿ ಏ.9ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು ಎಂಟು ವಿಚಕ್ಷಣಾ ತಂಡಗಳನ್ನು ರಚಿಸಲಾಗಿದೆ ಎಂದು ಚುನಾವಣಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.ಅಕ್ರಮ ಮದ್ಯ ಮಾರಾಟ ಹಾಗೂ ಸಾಗಣೆಯನ್ನು ತಡೆಗಟ್ಟಲು ಕಟ್ಟೆಚ್ಚರ ವಹಿಸಲಾಗಿಸೀ ಸಂಬಂಧ ಅಬಕಾರಿ ಅಧಿಕಾರಿಗಳ ಗಸ್ತು ತೀವ್ರಗೊಳಿಸಲಾಗಿದ್ದು ಮೂರು ಕಡೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.ನಾಮಪತ್ರ ಸಲ್ಲಿಕೆಗೆ ಅಭ್ಯರ್ಥಿಯ ಜೊತೆಗೆ ನಾಲ್ಕು ಮಂದಿ ಮಾತ್ರ ಚುನಾವಣಾಧಿಕಾರಿ ಕೊಠಡಿ ಪ್ರವೇಶಿಸಲು ಅವಕಾಶವಿದೆ. ಅದೇ ವೇಳೆ ಅಭ್ಯರ್ಥಿ ಮೂರು ವಾಹನ ಮಾತ್ರ ಉಪಯೋಗಿಸಲು ಅವಕಾಶವಿದ್ದು, ಹೆಚ್ಚುವರಿ ವಾಹನ ಉಪಯೋಗಿಸಿದಲ್ಲಿ ಅದನ್ನು ಅಭ್ಯರ್ಥಿಯ ಚುನಾವಣಾ ವೆಚ್ಚಕ್ಕೆ ಸೇರಿಸಲಾಗುವುದು. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಪಕ್ಷದ ಬಾವುಟ ಉಪಯೋಗಿಸುವಂತಿಲ್ಲ. ಮೆರವಣಿಗೆಗೆ ಪೊಲೀಸರ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕಿದೆ ಎಂದು ಅವರು ತಿಳಿಸಿದರು.ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ನೀರಾವರಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಿರುಹೊತ್ತಿಗೆ ಹಂಚಿದ್ದಾರೆ ಎಂದು ಜೆಡಿಸ್ ಧುರೀಣರು ನೀಡಿರುವ ದೂರನ್ನು ಚುನಾವಣಾ ಆಯೋಗಕ್ಕೆ ಕಳುಹಿಸಿದ್ದು, ಆಯೋಗ ಅದರ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು.ದಿಢೀರ್ ಸ್ವಚ್ಛತಾಕಾರ್ಯ: ತಾಲ್ಲೂಕು ಕಚೇರಿ ಆವರಣದಲ್ಲಿ ಶನಿವಾರ ದಿಢೀರನೆ ಸ್ವಚ್ಛತಾ ಕಾರ್ಯ ಆರಂಭವಾಗಿದೆ. ಆವರಣವನ್ನು ಜೆಸಿಬಿ ಯಂತ್ರ ಉಪಯೋಗಿಸಿ ಸ್ವಚ್ಛಗೊಳಿಸಲಾಗಿದೆ. ಆವರಣದ ಗೋಡೆಗಳಿಗೆ ಅಂಟಿಸಿದ್ದ ಪೋಸ್ಟರುಗಳನ್ನು ಕಿತ್ತು ಹಾಕುವ ಕಾರ್ಯದಲ್ಲಿ ಸಿಬ್ಬಂದಿ ತೊಡಗಿದ್ದರು.ಹಾಲಿ ಇರುವ ತಾಲ್ಲೂಕು ಕಚೇರಿ ಹಳೆಕಟ್ಟಡದ ಹಿಂಭಾಗದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇದೀಗ ಹಳೆಕಟ್ಟಡದ ಮುಂಭಾಗಕ್ಕೆ ಬಣ್ಣ ಬಳಿಯುವ ಕಾರ್ಯವೂ ಆರಂಭಗೊಳ್ಳುತ್ತಿದೆ. ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ವೀಕ್ಷಕರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದಿಢೀರ್ ಸ್ವಚ್ಛತಾಕಾರ್ಯ ಆರಂಭಿಸಲಾಗಿದೆ ಎನ್ನಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.