ಶುಕ್ರವಾರ, ಜೂನ್ 25, 2021
29 °C

ಚುನಾವಣಾ ಅಧಿಸೂಚನೆ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಲೋಕಸಭಾ ಚುನಾವಣೆ ನಿಮಿತ್ತ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಾಗಿ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಎಂ.ಟಿ. ರೇಜು ಅವರು ಅಧಿಸೂಚನೆ ಪ್ರಕಟಿಸಿದ್ದಾರೆ.ಚುನಾವಣೆಯಲ್ಲಿ ಸ್ಪರ್ಧಿಸ ಬಯಸುವ ಅಭ್ಯರ್ಥಿಗಳು ಮಾರ್ಚ್‌ 19 ರಿಂದ 26ರವರೆಗೆ ಚುನಾವಣಾಧಿ ಕಾರಿಗಳ ಕಾರ್ಯಾಲಯದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯೊಳ ಗಾಗಿ ನಾಮಪತ್ರ ಸಲ್ಲಿಸಬಹುದಾಗಿದೆ. ಮಾರ್ಚ್‌ 27ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದ್ದು, ನಾಮಪತ್ರಗಳನ್ನು ವಾಪಸ್‌ ತೆಗೆದುಕೊಳ್ಳಲು ಮಾರ್ಚ್‌ 29 ಕೊನೆ ದಿನವಾಗಿರುತ್ತದೆ. ನಾಮಪತ್ರಗಳನ್ನು ಸಲ್ಲಿಸುವಾಗ ಅಭ್ಯರ್ಥಿಯೂ ಸೇರಿದಂತೆ, ಐದು ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿಗೆ ಪ್ರವೇಶಿಸುವ ಅವ ಕಾಶ ನೀಡಲಾಗಿದೆ. ಚುನಾವಣಾಧಿಕಾರಿ ಕಚೇರಿಯ 100 ಮೀಟರ್ ಅಂತರದೊಳಗೆ 3 ವಾಹನಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.ಚುನಾವಣೆಗೆ ಸ್ಪರ್ಧಿಸುವ ಸಾಮಾನ್ಯ ಅಭ್ಯರ್ಥಿಯು ₨ 25 ಸಾವಿರ ಠೇವಣಿಯನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು  ₨ 12,500 ಠೇವಣಿ ನೀಡಬೇಕು ಎಂದು ಅವರು ಹೇಳಿದ್ದಾರೆ.ನೀತಿ ಸಂಹಿತೆ ಅನುಷ್ಠಾನ: ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ರಾಜಕೀಯ ಪಕ್ಷಗಳು ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ಅದರ ಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 141 ಸೆಕ್ಟರ್ ಅಧಿಕಾರಿಗಳನ್ನು, 26 ಫ್ಲೈಯಿಂಗ್ ಸ್ಕ್ವಾಡ್, 6 ವಿಡಿಯೊ ವೀವಿಂಗ್ ಟೀಮ್, 34 ಚೆಕ್‌ಪೋಸ್ಟ್‌ ಗಳನ್ನು ರಚಿಸಲಾಗಿದೆ.ವೆಚ್ಚ ವೀಕ್ಷಕರ ಆಗಮನ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಖರ್ಚು ವೆಚ್ಚಗಳನ್ನು ಪರಿಶೀಲಿಸಲು ಚುನಾವಣಾ ವೆಚ್ಚಗಳ ವೀಕ್ಷಕರಾಗಿ ಐಆರ್ಎಸ್ ಅಧಿಕಾರಿ ಸಮಯ್ ಮುರಳಿ ಅವರು ಜಿಲ್ಲೆಗೆ ಆಗಮಿಸಿದ್ದಾರೆ. ಚುನಾ ವಣಾ ಖರ್ಚು ವೆಚ್ಚ ಹಾಗೂ ಇತರ ಅಹವಾಲುಗಳ ಕುರಿತು ಸಾರ್ವಜನಿಕರು ಮೊ: 94812 51782 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.ನಾಮಪತ್ರ ಸಲ್ಲಿಕೆ ವಿವರ:  ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸುವ ಪ್ರಥಮ ದಿನವಾದ ಬುಧವಾರ ಜಿಲ್ಲೆಯಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ .

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.