ಚುನಾವಣಾ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸಲು ಸೂಚನೆ

7

ಚುನಾವಣಾ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸಲು ಸೂಚನೆ

Published:
Updated:

ಮಡಿಕೇರಿ: ಕಾಂಗ್ರೆಸ್ ಪಕ್ಷದಿಂದ ನಗರಸಭೆಗೆ ಸ್ಪರ್ಧಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾ ವಾರ್ಡಿನ ಅಧ್ಯಕ್ಷರ ಮೂಲಕ ನಗರ ಕಾಂಗ್ರೆಸ್ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹಾರೂನ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ನಗರ ಸಭಾ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಅರ್ಜಿ ಸಲ್ಲಿಸಿದ ಬಳಿಕ ಟಿ.ಜಾನ್ ಅಧ್ಯಕ್ಷತೆಯ ಜಿಲ್ಲಾ ಚುನಾವಣಾ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಮತ್ತಿತರ ಪ್ರಮುಖರು ಚರ್ಚಿಸಿದ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗೆ ಎಲ್ಲರೂ ಬೆಂಬಲಿಸಬೇಕೆಂದು ಹಾರೂನ್ ಹೇಳಿದರು.ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಂ. ನಾಣಯ್ಯ, ಪಕ್ಷದ ಜಿಲ್ಲಾಧ್ಯಕ್ಷ ಬಿ.ಟಿ. ಪ್ರದೀಪ್, ಪ್ರಧಾನ ಕಾರ್ಯದರ್ಶಿ ಟಿ.ಎಂ. ಐಯ್ಯಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಗಣೇಶ್ ಮಾತನಾಡಿದರು.ಕೆಪಿಸಿಸಿ ಕಾರ್ಯದರ್ಶಿ ವೀಣಾ ಅಚ್ಚಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಚಂಗಪ್ಪ, ವಿ.ಪಿ. ಸುರೇಶ್, ಸದಸ್ಯರಾದ ಹನೀಫ್, ಉಸ್ಮಾನ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry