ಶುಕ್ರವಾರ, ಏಪ್ರಿಲ್ 16, 2021
31 °C

ಚುನಾವಣಾ ಆಯೋಗಕ್ಕೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಘುನಂದನ್ ರಾಮಣ್ಣ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದು, ಈ ತಕ್ಷಣವೇ ಅದನ್ನು ಸರಿಪಡಿಸುವಂತೆ ಪ್ರದೇಶ ಕಾಂಗ್ರೆಸ್ ಸಮಿತಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. ಇತ್ತೀಚೆಗೆ ನಡೆದ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ರಘುನಂದನ್ ಮತದಾನ ಮಾಡಿದ್ದು, ಆ ನಂತರ ಅವರ ಹೆಸರನ್ನು ಪಟ್ಟಿಯಿಂದ ತೆಗೆಯಲಾಗಿದೆ. ಹೀಗಾಗಿ ತಕ್ಷಣ ಅವರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆಯೋಗವನ್ನು ಆಗ್ರಹಪಡಿಸಿದರು.ಪರಮೇಶ್ವರ್ ಜತೆ, ಕಾಂಗ್ರೆಸ್ ಅಭ್ಯರ್ಥಿ ರಘುನಂದನ್, ಮುಖಂಡರಾದ ವಿ.ಎಸ್.ಉಗ್ರಪ್ಪ, ರಾಮಚಂದ್ರಪ್ಪ ಸೇರಿದಂತೆ ಇತರರು ಮುಖ್ಯ ಚುನಾವಣಾಧಿಕಾರಿ ಸಿ.ಎಸ್.ಸುರಂಜನ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. ರಾಜ್ಯ ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಸದಸ್ಯರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆಯುವ ಕೆಲಸ ಮಾಡುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಹೇಳಿದರು.ರಘುನಂದನ್ ಅವರು ಇದೇ 10ರಂದು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಜಿ ಕೊಟ್ಟಿದ್ದಾರೆ. ಅದನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು. ರಘುನಂದನ್ ಅವರ ಹೆಸರನ್ನು ಯಾರೂ ಮತದಾರರ ಪಟ್ಟಿಯಿಂದ ಕೈಬಿಟ್ಟಿಲ್ಲ. 2009ರ ಸಾಮಾನ್ಯ ಚುನಾವಣೆಯಲ್ಲೂ ಅವರ ಹೆಸರು ಪಟ್ಟಿಯಲ್ಲಿ ಇರಲಿಲ್ಲ ಎಂದು ಆಯೋಗದ ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.