`ಚುನಾವಣಾ ಕಣಕ್ಕೆ ಜನಾರ್ದನ ರೆಡ್ಡಿ'

7

`ಚುನಾವಣಾ ಕಣಕ್ಕೆ ಜನಾರ್ದನ ರೆಡ್ಡಿ'

Published:
Updated:

ಬಳ್ಳಾರಿ: ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಇಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು, `ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕೋರಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಜನಾರ್ದನ ರೆಡ್ಡಿ ಪ್ರಮಾಣಪತ್ರ ಸಲ್ಲಿಸಿದ್ದಾರೆ. ರಾಜ್ಯದ ಯಾವುದಾದರೂ ಕ್ಷೇತ್ರದಿಂದ ಅವರು ಸ್ಪರ್ಧಿಸಲಿದ್ದಾರೆ' ಎಂದರು.

`ಇತ್ತೀಚೆಗಷ್ಟೇ ಕಾರಾಗೃಹದಲ್ಲಿ ಅವರೊಂದಿಗೆ ಚರ್ಚಿಸಿದ್ದೇನೆ. ಅವರು ಎಲ್ಲಿಂದ ಸ್ಪರ್ಧಿಸಲಿದ್ದಾರೆಂಬುದು ಅಂತಿಮವಾಗಿಲ್ಲ. ರಾಜ್ಯದ ಯಾವುದೇ ಕ್ಷೇೀತ್ರದಿಂದ ಸ್ಪರ್ಧಿಸಿದರೂ ಗೆಲುವು ಸಾಧಿಸುವರು ಎಂಬ ವಿಶ್ವಾಸವಿದೆ' ಎಂದರು.

ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖಂಡರು ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯರಾದ ದಿವಾಕರ್ ಅವರು ಮೊಳಕಾಲ್ಮೂರು ಕ್ಷೇತ್ರದಿಂದ ಹಾಗೂ ಅನಿಲ ಮೆಣಸಿನಕಾಯಿ ಗದಗ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕೆಲವೇ ದಿನಗಳಲ್ಲಿ ಇತರ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry