ಸೋಮವಾರ, ಜೂನ್ 21, 2021
21 °C

ಚುನಾವಣಾ ಕರ್ತವ್ಯಕ್ಕೆ ಐಎಎಸ್‌ ಅಧಿಕಾರಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚುನಾವಣಾ ಆಯೋಗದ ಸಲಹೆ ಮೇರೆಗೆ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ

ನಿಯೋಜಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾ ಇಡುವುದಕ್ಕೆ ಭೂಮಾಪನ ಇಲಾಖೆ ಆಯುಕ್ತ ವಿ.ಪೊನ್ನುರಾಜ್‌ ಅವರನ್ನು ನೇಮಿಸಲಾಗಿದೆ.ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ವಿಶೇಷ ಕರ್ತವ್ಯ ಅಧಿ­ಕಾರಿಯಾಗಿ (ಚುನಾವಣಾ ವೆಚ್ಚ) ಅವರು ಕಾರ್ಯನಿರ್ವ­ಹಿಸ­ಲಿದ್ದಾರೆ. ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ಕೆ.ಆರ್‌.ನಿರಂಜನ ಅವರನ್ನು ಬೃಹತ್‌ ಬೆಂಗ­ಳೂರು ಮಹಾ­-ನಗರ ಪಾಲಿಕೆಯಲ್ಲಿ ಹೊಸದಾಗಿ ಸೃಷ್ಟಿಸಿರುವ ಚುನಾವಣಾ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಲೋಕಸಭಾ ಚುನಾವಣೆ ಮುಗಿಯುವವರೆಗೂ ಈ ಅಧಿಕಾರಿಗಳು ಈ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.