ಶುಕ್ರವಾರ, ಜೂನ್ 25, 2021
30 °C

ಚುನಾವಣಾ ಕರ್ತವ್ಯ ನಿರ್ಲಕ್ಷ್ಯ: ಪ್ರಾಚಾರ್ಯ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಪ್ರಾಚಾರ್ಯರೊಬ್ಬರನ್ನು ಬಂಧಿಸಿ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ಹಾಜರುಪಡಿಸಿದ ಪ್ರಕರಣ ನಗರದಲ್ಲಿ ಸೋಮವಾರ ನಡೆದಿದೆ.ಚುನಾವಣಾ ಕರ್ತವ್ಯಕ್ಕೆ ನಿಯೋ­ಜಿಸಲು ಭಾಲ್ಕಿ ಪಟ್ಟಣದ ಸಿ.ಬಿ. ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿ­ರುವ ಸಿಬ್ಬಂದಿಯ ಪಟ್ಟಿ ನೀಡುವಂತೆ ಪ್ರಾಚಾರ್ಯರಿಗೆ ತಿಳಿಸಲಾಗಿತ್ತು. ಆದರೆ ಸಿಬ್ಬಂದಿ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ 1951 ರ ಅಡಿ ಪ್ರಾಚಾರ್ಯರನ್ನು ಬಂಧಿಸಿ ಚುನಾವಣಾಧಿಕಾರಿ ಕಚೇರಿಗೆ ಹಾಜರು ಪಡಿಸಲಾಯಿತು ಎಂದು ಜಿಲ್ಲಾಧಿಕಾರಿ ಕಚೇರಿ ಹೇಳಿಕೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.