ಬುಧವಾರ, ಜೂನ್ 16, 2021
27 °C

ಚುನಾವಣಾ ಕರ್ತವ್ಯ ಲೋಪ: ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸಲು ಚುನಾವಣಾ ಆಯೋಗದ ನಿರ್ದೇಶನದಂತೆ ಮತಗಟ್ಟೆಗಳಲ್ಲಿ ಸಮರ್ಪಕವಾಗಿ ವಿಶೇಷ ಶಿಬಿರ ನಡೆಸದ ಆರೋಪದ ಮೇಲೆ ಕೆಂಪೇಗೌಡನಗರ ಉಪ ವಿಭಾಗದ ಕಂದಾಯ ವಸೂಲಿಗಾರ ಎಚ್‌.ಜಿ. ಸುರೇಶ್‌ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.ಕೆಂಪೇಗೌಡನಗರ ಬಾಲಕರ ಪ್ರೌಢಶಾಲೆಯಲ್ಲಿ ಮತಗಟ್ಟೆ ಸಂಖ್ಯೆ ೬೯, ೭೦, ೭೧, ೭೨ರ ಮತದಾರರ ಪಟ್ಟಿ ದೋಷ ಸರಿಪಡಿಸಲು ಶಿಬಿರ ನಡೆಸಬೇಕಿತ್ತು. ಶಾಲೆಯ ದ್ವಾರ ತೆಗೆಸದೆ ಹೊರಭಾಗದಲ್ಲಿ ನಿಂತು ಸಾರ್ವಜನಿಕರಿಗೆ ಅರ್ಜಿಗಳನ್ನು ನೀಡುತ್ತಿದ್ದುದು ಕಂಡುಬಂದಿದೆ. ಚುನಾವಣಾ ಕರ್ತವ್ಯದಲ್ಲಿ ಲೋಪ ಎಸಗಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.