ಸೋಮವಾರ, ಜೂನ್ 21, 2021
29 °C

ಚುನಾವಣಾ ಚುಟುಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಮಿಳುನಾಡು: ಮೈತ್ರಿ ಮಾತುಕತೆ ಪೂರ್ಣ

ಚೆನ್ನೈ (ಪಿಟಿಐ): ತಮಿಳುನಾಡಿನಲ್ಲಿ ತನ್ನ ಮಿತ್ರ ಪಕ್ಷಗಳೊಂದಿಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಾತುಕತೆ ಬಹುತೇಕ ಸಂಪೂರ್ಣವಾಗಿದೆ ಎಂದು ಬಿಜೆಪಿ ಹೇಳಿದೆ.‘ಮಿತ್ರಪಕ್ಷಗಳ ಜತೆಗಿನ  ಹೊಂದಾಣಿಕೆ ಪ್ರಕ್ರಿಯೆ ಶೇ 99.5ರಷ್ಟು ಪೂರ್ಣ­ಗೊಂಡಿದೆ. ಮೈತ್ರಿಕೂಟವು ರಾಜ್ಯದಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಜಯ ಗಳಿಸಲಿದೆ’ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್‌ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಡಿಎಂಡಿಕೆ, ಎಂಡಿಎಂಕೆ, ಪಿಎಂಕೆ, ಐಜೆಕೆ ಮತ್ತು ಕೆಎಂಡಿಕೆ ಪಕ್ಷಗಳ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಬಿಜೆಪಿ ಮತ್ತು ಮಿತ್ರ ಪಕ್ಷಗಳು ಸ್ಪರ್ಧಿಸಲಿರುವ ಕ್ಷೇತ್ರಗಳನ್ನು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್‌ ವಾರಾಂತ್ಯದಲ್ಲಿ ಪ್ರಕಟ ಮಾಡಲಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.