ಮಂಗಳವಾರ, ಜೂನ್ 15, 2021
21 °C

ಚುನಾವಣಾ ನೀತಿ ಸಂಹಿತೆ ಅನುಷ್ಠಾನ ಸಮಿತಿ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಅನುಷ್ಠಾನ ಸಮಿತಿಗಳನ್ನು ಜಿಲ್ಲಾ, ತಾಲ್ಲೂಕು ಹಾಗೂ ಸೆಕ್ಟರ್ ಮಟ್ಟದಲ್ಲಿ ರಚನೆ ಮಾಡಲಾಗಿದೆ.ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಎಮ್‌.ಟಿ. ರೇಜು ಅಧ್ಯಕ್ಷರಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್‌. ದಿಲೀಪ್‌, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಅಬಕಾರಿ ಇಲಾಖೆ ಜಿಲ್ಲಾಧಿಕಾರಿಗಳು ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಸದಸ್ಯರಾಗಿ ರುತ್ತಾರೆ. ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಎಂಜಿನಿ ಯರ್‌ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ.ತಾಲ್ಲೂಕು ಮಟ್ಟ: ಕಾರವಾರ– ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮುಖ್ಯಸ್ಥ ರಾಗಿದ್ದಾರೆ. ಅಂಕೋಲಾ– ಕಾರ ವಾರದ ಕೃಷಿ ಇಲಾಖೆ ಜಂಟಿ ನಿರ್ದೇ ಶಕರು, ಕುಮಟಾ– ಕಾರವಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಹೊನ್ನಾವರ– ಕಾರ ವಾರದ ಸಹಕಾರಿ ಸಂಘಗಳ ಇಲಾಖೆ ಉಪನಿಬಂಧಕರು, ಭಟ್ಕಳ– ಹೊನ್ನಾ ವರದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಶಿರಸಿ– ಕೆ.ಪಿ.ಟಿ.ಸಿ.ಎಲ್‌ನ ಕಾರ್ಯ ನಿರ್ವಾಹಕ ಎಂಜಿನಿಯರ್ ಹರೀಶ ನಾಯ್ಕ, ಸಿದ್ದಾಪುರ– ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ, ಯಲ್ಲಾಪುರ– ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಟಿ. ಮರಗೂಲಪ್ಪನವರ್, ಮುಂಡ ಗೋಡ– ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್.ಆರ್.ನಾಯ್ಕ, ಹಳಿಯಾಳ– ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯ ನಿರ್ವಾಹಕ ಎಂಜಿನಿಯರ್‌, ಜೋಯಿಡಾ– ಕಾರವಾರದ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಮುಖ್ಯಸ್ಥ ರಾಗಿದ್ದಾರೆ. ಆಯಾ ತಾಲ್ಲೂಕಿನ ಸರ್ಕಲ್ ಇನ್ಸಪೆಕ್ಟರ್, ಅಬಕಾರಿ ಇನ್‌ಸ್ಪೆಕ್ಟರ್‌, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಸದಸ್ಯ ರಾಗಿದ್ದು, ತಹಶೀಲ್ದಾರರು ಸಮಿತಿ ಸದಸ್ಯ ಕಾರ್ಯದರ್ಶಿ ಗಳಾಗಿದ್ದಾರೆ. ಸೆಕ್ಟರ್ ಮಟ್ಟದಲ್ಲಿ ಸೆಕ್ಟರ್ ಅಧಿಕಾರಿ ಗಳು ಮುಖ್ಯಸ್ಥರಾಗಿರುತ್ತಾರೆ. ಸೆಕ್ಟರ್ ಕ್ಷೇತ್ರಕ್ಕೆ ಸಂಬಂಧಿಸಿದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯ್ತಿ ಕಾರ್ಯದರ್ಶಿಗಳು ಗ್ರಾಮ ಲೆಕ್ಕಾಧಿಕಾರಿಗಳು ಸದಸ್ಯರಾಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಕಾರವಾರ: ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ಉಪಾಧೀಕ್ಷಕರು ಮಾರ್ಚ್‌ ತಿಂಗಳಿನಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಇದೇ 14ರಂದು ಯಲ್ಲಾಪುರದ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11ರಿಂದ 12.-30 ರವರೆಗೆ, ಮುಂಡಗೋಡ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 3- ರಿಂದ 4-.30 ರ ವರೆಗೆ, 15 ರಂದು ಸಿದ್ದಾಪುರ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11-ರಿಂದ 12-.30ರವರೆಗೆ, ಶಿರಸಿ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 3-ರಿಂದ 4-.30 ರ ವರೆಗೆ, 17ರಂದು ಕುಮಟಾ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11-ರಿಂದ 12-.30 ರ ವರೆಗೆ , ಅಂಕೋಲಾ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 3 ರಿಂದ 4-.30 ರವರೆಗೆ, 18ರಂದು ಭಟ್ಕಳ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11-ರಿಂದ 12-.30 ರ ವರೆಗೆ, ಹೊನ್ನಾವರ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 3ರಿಂದ 4-.30 ರ ವರೆಗೆ, 19ರಂದು ಕಾರವಾರ ಲೋಕಾಯುಕ್ತ ಕಚೇರಿಯಲ್ಲಿ ಬೆಳಿಗ್ಗೆ 11ರಿಂದ 12.-30 ರವರೆಗೆ, 20ರಂದು ಜೋಯಿಡಾ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ11ರಿಂದ 12.-30 ರವರೆಗೆ ಹಾಗೂ ಹಳಿಯಾಳ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 3ರಿಂದ 4-.30 ರವರೆಗೆ ಅಹವಾಲುಗಳನ್ನು ಸ್ವೀಕರಿಸಲಿ ದ್ದಾರೆ.ಸಂಬಂಧಪಟ್ಟ ತಾಲ್ಲೂಕುಗಳಲ್ಲಿ ಮತ್ತು ಜಿಲ್ಲೆಯ ಯಾವುದೇ ಸರ್ಕಾರಿ ಕಾರ್ಯಾಲಯದಲ್ಲಿ ಸಾರ್ವಜನಿಕರಿಗೆ ಕೆಲಸ ಮಾಡಿ ಕೊಡುವಲ್ಲಿ ಅನವಶ್ಯಕ ವಿಳಂಬ ಅಥವಾ ಇನ್ನಾವುದೇ ತರಹದ ತೊಂದರೆಗಳಿದ್ದಲ್ಲಿ ದೂರುಗಳನ್ನು ಸಲ್ಲಿಸಬಹುದಾಗಿದೆ.

ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ  ಸಾರ್ವ ಜನಿಕರು ತಮ್ಮ ಅಹವಾಲುಗಳನ್ನು ನೀಡಬಹುದಾಗಿದೆ.

ಪೊಲೀಸ್ ಅಧೀಕ್ಷಕರ ಕಚೇರಿ ದೂ. ಸಂ: 08382 -222202 ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದು ಲೋಕಾಯುಕ್ತ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.