ಭಾನುವಾರ, ಜನವರಿ 19, 2020
20 °C

ಚುನಾವಣಾ ರಾಜ್ಯಗಳಲ್ಲಿ ಒಳಮೀಸಲಿಗೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಶೇ 4.5ರಷ್ಟು ಒಳ ಮೀಸಲಾತಿ ಕಲ್ಪಿಸಿದ ನಿಯಮವನ್ನು ಚುನಾವಣೆ ನಡೆಯುವ 5 ರಾಜ್ಯಗಳಲ್ಲಿ ಜಾರಿಗೊಳಿಸದಂತೆ ಕೇಂದ್ರ ಚುನಾವಣಾ ಆಯೋಗ ಸರ್ಕಾರಕ್ಕೆ ನಿರ್ದೇಶಿಸಿದೆ.

ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಕೇವಲ ಎರಡು ದಿನ ಮುಂಚೆ, ಅಂದರೆ ಡಿ.22ರಂದು ಸರ್ಕಾರ ಈ ನಿರ್ಧಾರ ಪ್ರಕಟಿಸಿತ್ತು.ಈ ನಿರ್ಧಾರ ಮತದಾರರ ಮೇಲೆ ಪ್ರಭಾವ ಬೀರುತ್ತದೆಂದು ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆ ಮುಗಿಯುವರೆಗೆ ಈ ರಾಜ್ಯಗಳಲ್ಲಿ ಅದರ ಜಾರಿ ತಡೆಹಿಡಿಯಬೇಕೆಂದು ಆಯೋಗ ಸ್ಪಷ್ಟಪಡಿಸಿದೆ.

ಪ್ರತಿಕ್ರಿಯಿಸಿ (+)