ಬುಧವಾರ, ನವೆಂಬರ್ 13, 2019
28 °C

ಚುನಾವಣಾ ವೀಕ್ಷಕರ ನೇಮಕ

Published:
Updated:

ಚಿಕ್ಕಮಗಳೂರು: ಕೇಂದ್ರ ಚುನಾವಣಾ ಆಯೋಗವು ಜಿಲ್ಲಾ ವ್ಯಾಪ್ತಿಯ 5 ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಸಾಮಾನ್ಯ ವೀಕ್ಷಕರನ್ನು ನೇಮಿಸಿದೆ.ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ವೀಕ್ಷಕರಾಗಿ ಐಎಫ್‌ಎಸ್ ಅಧಿಕಾರಿ ಎಂ.ಎನ್.ನಗುಲ್ಲಿ (ಮೊಬೈಲ್ ಸಂಖ್ಯೆ 8762045710) ಕೊಪ್ಪ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮೂಡಿಗೆರೆ ವಿಧಾನಸಭಾ ಕ್ಷೇತ್ರಕ್ಕೆ ವೀಕ್ಷಕರಾಗಿ ನೇಮಕಗೊಂಡಿರುವ ಎ.ಶೇಖರ್ ಬಾಬು (ಮೊಬೈಲ್ ಸಂಖ್ಯೆ 8762045704) ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ವೀಕ್ಷಕರಾಗಿ ಐಎಎಸ್ ಅಧಿಕಾರಿ ಬಾಲಕೃಷ್ಣ ಮೀನ (ಮೊಬೈಲ್ ಸಂಖ್ಯೆ 8762045705) ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ತರೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ವೀಕ್ಷಕರಾಗಿ ನೇಮಕವಾಗಿರುವ ಐಎಎಸ್ ಅಧಿಕಾರಿ ಟಿ.ಎನ್.ವೆಂಕಟೇಶ್ (ಮೊಬೈಲ್ ಸಂಖ್ಯೆ 8762045706) ತರೀಕೆರೆ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.ಕಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ವೀಕ್ಷಕರಾಗಿ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಬಾದಲ್ ಚಟರ್ಜಿ (ಮೊಬೈಲ್ ಸಂಖ್ಯೆ 8762045708) ಕಡೂರು ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.ವೀಕ್ಷಕರು ಪ್ರತಿದಿನ ಕಚೇರಿ ಸಮಯದಲ್ಲಿ ಸಂಜೆ 4ರಿಂದ 5ರವರೆಗೆ ಸಂಬಂಧಿಸಿದ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.

ಪ್ರತಿಕ್ರಿಯಿಸಿ (+)