ಸೋಮವಾರ, ಜನವರಿ 27, 2020
26 °C

ಚುನಾವಣೆಯಲ್ಲಿ ನೆಲಕಚ್ಚಲಿದೆ ಕಾಂಗ್ರೆಸ್‌: ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಳವಳ್ಳಿ: ಉತ್ತರ ಭಾರತದಲ್ಲಿ ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತದಾರರು ತಿರಸ್ಕರಿಸಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನೆಲಕಚ್ಚಲಿದೆ ಎಂದು  ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದರು.ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಎಚ್.ಡಿ. ಕುಮಾರಸ್ವಾಮಿ ಅಭಿಮಾನಿಗಳು ಆಯೋಜಿಸಿದ್ದ ಜನ್ಮದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸನ್ನು ತಿರಸ್ಕರಿಸಿದ್ದಾರೆ ಎಂದರು.

ಇದಕ್ಕೂ ಮುನ್ನಾ ಅವರ ಜನ್ಮದಿನದ ಅಂಗವಾಗಿ ಪಟ್ಟಣದಲ್ಲಿ ರಕ್ತದಾನ ಶಿಬಿರ, ರೋಗಿಗಳಿಗೆ ಹಣ್ಣು ವಿತರಣೆ, ರಸಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.ಶಾಸಕ ಕೆ.ಸಿ. ನಾರಾಯಣಗೌಡ, ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಬಿ. ರಾಮಕೃಷ್ಣ, ಮಾಜಿ ಶಾಸಕರಾದ ಡಾ.ಕೆ. ಅನ್ನದಾನಿ, ಸಿ.ಎಸ್. ಪುಟ್ಟರಾಜು, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ. ರಮೇಶ್, ತಾಲ್ಲೂಕು ಅಧ್ಯಕ್ಷ ಕೆಂಚೇಗೌಡ, ಯುವ ಘಟಕದ ಅಧ್ಯಕ್ಷ

ಟಿ. ನಂದಕುಮಾರ್, ಕಾರ್ಯಧ್ಯಕ್ಷ ಮಲ್ಲೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯೆ ದಿವ್ಯಶ್ರೀ, ಜಕ್ರಿಯಾಖಾನ್, ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ, ಎಂ.ಎ. ಚಿಕ್ಕರಾಜು, ಸದಸ್ಯ ರಾಜಣ್ಣ, ಮಹೇಶ್, ಎಂ.ಎಸ್. ರಮೇಶ್, ಮೆಹಬೂಬ್‌ಪಾಷ, ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ವಿ. ಪ್ರಕಾಶ್ ಹಾಜರಿದ್ದರು.

ಪ್ರತಿಕ್ರಿಯಿಸಿ (+)