ಮಂಗಳವಾರ, ಮೇ 11, 2021
19 °C

ಚುನಾವಣೆ: ಪೊಲೀಸರಿಂದ ಪಥ ಸಂಚಲನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಸೆ. 26ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿ ಪೊಲೀಸ್ ಇಲಾಖೆಯಿಂದ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು.ನಗರದಲ್ಲಿರುವ ಪೊಲೀಸ್ ಕವಾಯತು ಮೈದಾನದಿಂದ ಆರಂಭಗೊಂಡ ಈ ಪಥ ಸಂಚಲನಕ್ಕೆ ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್ ಹಸಿರು ನಿಶಾನೆ ತೋರಿದರು.ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಪೊಲೀಸ್ ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪಥ ಸಂಚಲನವು ಮೈದಾನದಲ್ಲಿ ಮುಕ್ತಾಯಗೊಂಡಿತು.`207 ವಜ್ರ~ ಎಂಬ ರ‌್ಯಾಪಿಡ್ ಇಂಟರ್‌ವೆನ್ಶನ್ ವಾಹನ, ಸಶಸ್ತ್ರ ಮೀಸಲು ಪಡೆ, ಕ್ಷಿಪ್ರ ಕಾರ್ಯಾಚರಣೆ ಪಡೆ, ನಾಗರಿಕ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದ ಪಡೆ ನಗರದಲ್ಲಿ ಪಥ ಸಂಚಲನ ನಡೆಸುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗೆ ಸದಾ ಸಿದ್ಧ ಎಂಬ ಸಂದೇಶ ರವಾನಿಸಿತು.ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಪ್ರಕಾಶ್, ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು 12 ಡಿಎಆರ್ ತುಕಡಿ, 4 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು ಎಂದರು.ನಾಲ್ವರು ಡಿಎಸ್‌ಪಿ, 12 ಜನ ಸಿಪಿಐ, 35 ಪಿಎಸ್‌ಐ, 66 ಜನ ಎಎಸ್‌ಐ, 35 ಜನ ಮಹಿಳಾ ಪೊಲೀಸ್ ಸಿಬ್ಬಂದಿ, 420 ಜನ ಗೃಹರಕ್ಷಕ ದಳದ ಸಿಬ್ಬಂದಿ ಬಂದೋಬಸ್ತ್ ಕಾರ್ಯಕ್ಕೆ ಅಗತ್ಯವಿದೆ. ಜಿಲ್ಲೆಯಲ್ಲಿ ಲಭ್ಯವಿರುವ ಸಿಬ್ಬಂದಿಯನ್ನಲ್ಲದೇ, ಇತರ ಜಿಲ್ಲೆಗಳಿಂದ ಅಗತ್ಯವಿರುವಷ್ಟು ಸಂಖ್ಯೆಯ ಪೊಲೀಸ್ ಪಡೆಯನ್ನು ಕರೆಸಲಾಗುವುದು ಎಂದು ಹೇಳಿದರು. ಡಿವೈಎಸ್‌ಪಿ ಡಿ.ಎಲ್.ಹಣಗಿ ಮತ್ತಿತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.