ಚುನಾವಣೆ ಫಲಿತಾಂಶ ತೀರ್ಪಿಗೆ ಬದ್ಧ

7

ಚುನಾವಣೆ ಫಲಿತಾಂಶ ತೀರ್ಪಿಗೆ ಬದ್ಧ

Published:
Updated:

ಬೆಂಗಳೂರು:  ರಾಜ್ಯದಲ್ಲಿನ ಎಲ್ಲ ತಾಲ್ಲೂಕು ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆ ಮುಂದುವರಿಸಲು ಅನುಮತಿ ನೀಡಿರುವ ಹೈಕೋರ್ಟ್, ಚುನಾವಣೆಯ ಫಲಿತಾಂಶ ಮಾತ್ರ ತನ್ನ ಅಂತಿಮ ಆದೇಶಕ್ಕೆ ಬದ್ಧವಾಗಿರಬೇಕು ಎಂದು ಶುಕ್ರವಾರ ಸೂಚಿಸಿದೆ.ಇದೇ ವೇಳೆ ರಾಜ್ಯದಲ್ಲಿನ 176 ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ನೀಡಿರುವ ಪಟ್ಟಿಯನ್ನು ಇದೇ ಸೋಮವಾರ ಹಾಜರು ಪಡಿಸುವಂತೆ ಸರ್ಕಾರಕ್ಕೆ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಆದೇಶಿಸಿದ್ದಾರೆ.ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ ಮಾಡಿ ಜ.29ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಿರುವ ನ್ಯಾಯಮೂರ್ತಿಗಳು ಮೇಲಿನಂತೆ ಆದೇಶಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry