ಮಂಗಳವಾರ, ಜೂನ್ 22, 2021
22 °C

ಚುನಾವಣೆ ಬಹಿಷ್ಕಾರ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶೃಂಗೇರಿ: ರಾಜ್ಯ ಸರ್ಕಾರ ವಿವಿಧ ಇಲಾಖೆ ದಿನಗೂಲಿ ನೌಕರರನ್ನು ಖಾಯಂಗೊಳಿಸಲು ಅನುಸ ರಿಸುತ್ತಿರುವ ವಿಳಂಬ ನೀತಿ ವಿರೋಧಿಸಿ ಕ್ಷೇತ್ರದ ಎಲ್ಲ ದಿನಗೂಲಿ ನೌಕರರು ಚುನಾವಣೆ ಬಹಿಷ್ಕರಿಸುವ ನಿರ್ಧಾರ ಕೈಗೊಂಡಿರು ವುದಾಗಿ ದಿನಗೂಲಿ ನೌಕರರ ತಾಲ್ಲೂಕು ಘಟಕ ಸಂಚಾಲಕ ಹಂದಿಗೋಡು ನಾಗೇಶ್ ತಿಳಿಸಿದ್ದಾರೆ.ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ದಿನಗೂಲಿ ನೌಕರರ ಖಾಯಂಗೆ ಸಂಬಂಧಿಸಿ ಸಚಿವ ಉದಾಸಿ ನೇತೃತ್ವದ ಉಪಸಮಿತಿವರದಿ ಜಾರಿಗೆ ವಿಳಂಬನೀತಿ ಅನುಸರಿಸುತ್ತಿದೆ. ಈ ಕುರಿತು ಯಾವುದೇ ಪಕ್ಷಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಆದ್ದರಿಂದ ಉಡುಪಿ-ಚಿಕ್ಕಮಗಳೂರು ಜಿಲ್ಲೆಯ ವಿವಿಧ ಇಲಾಖೆಯ ದಿನಗೂಲಿ ನೌಕರರು ಚುನಾವಣೆ ಬಹಿಷ್ಕರಿಲು ತೆಗೆದುಕೊಂಡಿರುವ ತೀರ್ಮಾನಕ್ಕೆ ತಾಲ್ಲೂಕು ಘಟಕ ಬೆಂಬಲ ನೀಡಿದೆ ಎಂದು ಅವರು ತಿಳಿಸಿದ್ದಾರೆ.

`ಹಿಂದೆ ಸರಿದಿಲ್ಲ~ಕೊಪ್ಪ: ತಾಲ್ಲೂಕಿನ ಹೆದ್ದಸೆ ಮತಗಟ್ಟೆ ವ್ಯಾಪ್ತಿಯ ಗ್ರಾಮಸ್ಥರು ಮತದಾನ ಬಹಿಷ್ಕಾರದಿಂದ ಹಿಂದೆ ಸರಿದಿಲ್ಲ ಎಂದು ಭೂಬ್ಯಾಂಕ್ ನಿರ್ದೇಶಕ ಲಕ್ಷ್ಮಿ ನಾರಾಯಣ ತಿಳಿಸಿದರು. ಹೆದ್ದಸೆ ಪರಿಶಿಷ್ಟ ಕಾಲೊನಿಯ ಕುಡಿಯುವ ನೀರು ಇನ್ನಿತರ  ಮೂಲಸೌಲಭ್ಯ ಕಲ್ಪಿಸದಿರುವುದು ಹಾಗೂ ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿ ಪಡಿಸದಿರುವುದು ಬಹಿಷ್ಕಾ ರಕ್ಕೆ ಕಾರಣ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಜಿ.ಪಂ.ಅಧ್ಯಕ್ಷೆ ಸುಚಿತಾ ನರೇಂದ್ರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಅಲಿಸುವ ಕಾರ್ಯಕ್ರಮ ನಿಗದಿ ಮಾಡಿದ್ದರು.  ಆದರೆ ಅಧ್ಯಕ್ಷರ ಬದಲಾಗಿ ಅಧ್ಯಕ್ಷರ ಪತಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಬಿ.ಸಿ. ನರೇಂದ್ರ ಗ್ರಾಮಕ್ಕೆ ಆಗಮಿಸಿದ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೆದ್ದಸೆ ಮತಗಟೆಯಲ್ಲಿ 140 ಮತದಾರರು ಮತ ಚಲಾಯಿಸದಿರಲು ನಿರ್ಧರಿಸಿದ್ದಾರೆಂದು ಅವರು ತಿಳಿಸಿದ್ದಾರೆ. ಗ್ರಾಮದಲ್ಲಿ ಚುನಾವಣ ಪ್ರಚಾರಕ್ಕೆ ಯಾವುದೇ ಅಡ್ಡಿ ಆತಂಕ ಗ್ರಾಮಸ್ಥರು ಉಂಟು ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಬಹಿಷ್ಕಾರ ಹಿಂದಕ್ಕೆ

ಚಿಕ್ಕಮಗಳೂರು: ಲೋಕಸಭಾ ಚುನಾ ವಣೆಯಲ್ಲಿ ಮತದಾನ ಬಹಿಷ್ಕರಿಸಿದ್ದ ನಿರ್ಧಾರವನ್ನು ತಾಲ್ಲೂಕಿನ ಚಿತ್ತುವಳ್ಳಿ ಗ್ರಾಮಸ್ಥರು ತಾತ್ಕಾಲಿಕವಾಗಿ ಕೈಬಿಟ್ಟಿದ್ದಾರೆ.ಗ್ರಾಮಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕಿ ಮೋಟಮ್ಮ, ಶಾಸಕ ಎಂ.ಪಿ.ಕುಮಾರಸ್ವಾಮಿ ಭೇಟಿ ನೀಡಿ, ಗ್ರಾಮಸ್ಥರ ಸಮಸ್ಯೆ ಆಲಿಸಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ಸೈಯದ್ ಅಹಮದ್, ಚಿಕ್ಕಣ್ಣ ಹಾಗೂ ಮುಖಂಡ ಸಿ.ಪಿ.ಭವಾನಿ ಶಂಕರ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.