ಮಂಗಳವಾರ, ನವೆಂಬರ್ 19, 2019
29 °C

ಚುನಾವಣೆ: ಮದ್ಯ ಮಾರಾಟ ನಿಷೇಧ

Published:
Updated:

ಬೆಂಗಳೂರು:  ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಸಂದರ್ಭದಲ್ಲಿ ಮತ್ತು ಮತ ಎಣಿಕೆ ಪ್ರಕ್ರಿಯೆ ವೇಳೆ ನಗರದಲ್ಲಿ ಮದ್ಯ ಮಾರಾಟ, ದಾಸ್ತಾನು ಹಾಗೂ ಸಾಗಣೆಯನ್ನು ನಿರ್ಬಂಧಿಸಿ ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ಆದೇಶ ಹೊರಡಿಸಿದ್ದಾರೆ.ಮೇ 3ರಂದು ಸಂಜೆ ಐದು ಗಂಟೆಯಿಂದ ಮೇ 5ರ ರಾತ್ರಿ 12 ಗಂಟೆವರೆಗೆ ಮತ್ತು ಮತ ಎಣಿಕೆ ಪ್ರಕ್ರಿಯೆ ನಡೆಯುವ ಮೇ 8ರಂದು ಬೆಳಿಗ್ಗೆ ಆರು ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಮದ್ಯದಂಗಡಿಗಳು, ಬಾರ್‌ಗಳು ಹಾಗೂ ರೆಸ್ಟೋರೆಂಟ್‌ಗಳಲ್ಲಿ ವಹಿವಾಟು ನಡೆಸಲು ಅವಕಾಶವಿಲ್ಲ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ಔರಾದಕರ್ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)