ಗುರುವಾರ , ಜೂನ್ 17, 2021
21 °C

ಚುನಾವಣೆ ವೇಳಾಪಟ್ಟಿ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ವೇಳಾ­ಪಟ್ಟಿ­ಯನ್ನು ಚುನಾವಣಾ ಆಯೋಗ ಬುಧವಾರ ಪ್ರಕಟಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ವಿ.ಎಸ್‌. ಸಂಪತ್‌, ಚುನಾವಣಾ ಆಯುಕ್ತ­ರಾದ ಎಚ್‌.ಎಸ್‌. ಬ್ರಹ್ಮ ಮತ್ತು ಎಸ್‌.ಎನ್‌.ಎ. ಜೈದಿ ನವದೆಹಲಿಯಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ವೇಳಾಪಟ್ಟಿ ಪ್ರಕಟಿಸಲಿದ್ದಾರೆ.



ವೇಳಾಪಟ್ಟಿ ಪ್ರಕಟವಾದ ತಕ್ಷಣ­ದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾವುದೇ ಪ್ರಮುಖ ನಿರ್ಧಾರ­ಗಳನ್ನು ಕೈಗೊಳ್ಳುವಂತಿಲ್ಲ.



15ನೇ ಲೋಕಸಭೆಯ ಅವಧಿ ಮೇ 31ರಂದು ಕೊನೆಗೊಳ್ಳಲಿದೆ. ಜೂನ್‌ 1ರ ಮೊದಲು ಹೊಸ ಲೋಕಸಭೆ ರಚನೆಯಾಗಬೇಕಿದೆ. ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೆ ಎರಡು ತಿಂಗಳ ಅವಧಿಯಲ್ಲಿ ಹಲವು ಹಂತ­ಗಳಲ್ಲಿ ಚುನಾವಣೆ ನಡೆಯಲಿದೆ. 2009ರ ಲೋಕಸಭೆ ಚುನಾವಣೆ ಐದು ಹಂತಗಳಲ್ಲಿ ನಡೆದಿತ್ತು. ಆದರೆ, ಈ ಬಾರಿ ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ಮತ್ತು ನಕ್ಸಲ್‌ಪೀಡಿತ ರಾಜ್ಯಗಳಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆಯೊಂದಿಗೆ ಚುನಾವಣೆ ನಡೆಸಲು ಹಲವು ಹಂತಗಳಲ್ಲಿ ಮತ­ದಾನ ನಡೆಸಲು ನಿರ್ಧರಿಸಲಾಗಿದೆ.



ಆಸ್ಸಾಂ, ಒಡಿಶಾ ಮತ್ತು ಹೊಸದಾಗಿ ರಚನೆಯಾಗಿರುವ ತೆಲಂಗಾಣವೂ ಸೇರಿರುವ ಆಂಧ್ರಪ್ರದೇಶ ವಿಧಾನ­ಸಭೆಗಳ ಚುನಾವಣಾ ವೇಳಾಪಟ್ಟಿ­ಯನ್ನೂ ಆಯೋಗ ಪ್ರಕಟಿಸುವ ನಿರೀಕ್ಷೆ ಇದೆ. ಈ ಮೂರೂ ರಾಜ್ಯಗಳಲ್ಲಿ ಲೋಕಸಭೆ ಜೊತೆಗೇ ಚುನಾವಣೆ ನಡೆಯಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.