ಗುರುವಾರ , ಜೂನ್ 24, 2021
23 °C

ಚುನಾವಣೆ: ಸ್ಪರ್ಧೆಗೆ ಸಚಿವ ಹುಕ್ಕೇರಿ ಹಿಂದೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಲೋಕಸಭೆ ಚುನಾವಣೆ­ಯಲ್ಲಿ ನಾನು ಸ್ಪರ್ಧಿಸದಂತೆ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ನನ್ನ ಅಭಿ­ಮಾನಿ­ಗಳು ಮನವಿ ಮಾಡುತ್ತಿ­ದ್ದಾರೆ. ಈ ಹಿನ್ನೆಲೆಯಲ್ಲಿ ನಾನು ಕಣದಿಂದ ಹಿಂದೆ ಸರಿದಿದ್ದೇನೆ’ ಎಂದು ಸಣ್ಣ ಕೈಗಾ­ರಿಕೆ ಸಚಿವ ಪ್ರಕಾಶ ಹುಕ್ಕೇರಿ ಶನಿವಾರ ಇಲ್ಲಿ ಸ್ಪಷ್ಟಪಡಿಸಿದರು.‘ನೀವು ಈಗಾಗಲೇ ಸಚಿವರಾಗಿದ್ದು, ಇನ್ನೂ ನಾಲ್ಕು ವರ್ಷಗಳ ಕಾಲ ಅಧಿ­ಕಾರ­ದಲ್ಲಿ ಇರುತ್ತೀರಿ. ಹೀಗಾಗಿ ನೀವು ಚುನಾವಣೆಗೆ ಸ್ಪರ್ಧಿಸಬೇಡಿ. ನಿಮ್ಮ ಮಗನನ್ನು ನಿಲ್ಲಿಸಿ, ನಾವು ಅವರನ್ನು ಗೆಲ್ಲಿಸುತ್ತೇವೆ ಎಂದು ಅಭಿಮಾನಿಗಳು ಒತ್ತಡ ಹಾಕಿದ್ದಾರೆ.ಹೀಗಾಗಿ ಮಗ ಗಣೇಶ ಹುಕ್ಕೇರಿಗೆ ಟಿಕೆಟ್‌ ನೀಡುವಂತೆ ಹೈಕಮಾಂಡ್‌ ಬಳಿ ಬೇಡಿಕೆ ಇಟ್ಟಿದ್ದೇನೆ. ಇನ್ನೂ ಯಾರ ಹೆಸರು ಅಂತಿಮ­ಗೊಂಡಿಲ್ಲ. ಗಣೇಶ ಹುಕ್ಕೇರಿ, ಲಕ್ಷ್ಮಣ­ರಾವ್‌ ಚಿಂಗಳೆ ಹಾಗೂ ಎ.ಬಿ. ಪಾಟೀಲ ಈ ಮೂವರ ಪೈಕಿ ಯಾರಿಗೇ ಟಿಕೆಟ್‌ ನೀಡಿದರೂ ಬೇಸರವಿಲ್ಲ. ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧವಾಗಿರುತ್ತೇನೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.