ಸೋಮವಾರ, ಮೇ 23, 2022
26 °C

ಚೆಟ್ಟಳ್ಳಿ: ಜಿ.ಪಂ ಸದಸ್ಯರ ಕಚೇರಿ ಪ್ರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿದ್ದಾಪುರ: ಜಿ.ಪಂ. ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಭಾನುವಾರ ತಮ್ಮ ಕಚೇರಿ ಯನ್ನು ಚೆಟ್ಟಳ್ಳಿಯಲ್ಲಿ ಪ್ರಾರಂಭಿಸಿದರು ಸ್ಥಳೀಯ ಕಾಫಿ ಬೆಳೆಗಾರ ಎಚ್.ಎಸ್. ತಿಮ್ಮಪ್ಪಯ್ಯ ಕಚೇರಿಯನ್ನು ಉದ್ಘಾಟಿಸಿದರು. ಸಾರ್ವಜನಿಕರ ಕುಂದು ಕೊರತೆಗಳನ್ನು ಪರಿಹರಿಸಲು ಮತ್ತು ನನ್ನ ಕ್ಷೇತ್ರದ ವ್ಯಾಪ್ತಿಯ ಜನರ ಅನುಕೂಲಕ್ಕಾಗಿ ಈ ಕಚೇರಿ ಯನ್ನು ತೆರೆಯಲಾಗಿದೆ. ಕಾರ್ಮಿಕರು ಈ ವ್ಯಾಪ್ತಿಯಲ್ಲಿ ಹೆಚ್ಚಾಗಿದ್ದು, ವಾರಾಂತ್ಯದಲ್ಲಿ ಮಾತ್ರ ಕರ್ಮಿಕರಿಗೆ ಬಿಡುವು ದೊರಕುವುದರಿಂದ ಶನಿವಾರ ಮತ್ತು ಬಾನುವಾರ ಕಚೇರಿ ಪ್ರಮುಖವಾಗಿ ತೆರೆದಿರುತ್ತದೆ ಎಂದು ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದರು.ಕಾರ್ಯಕ್ರಮದಲ್ಲಿ ಸೋಮವಾರ ಪೇಟೆ ತಾ.ಪಂ. ಅಧ್ಯಕ್ಷ ವಿ.ಕೆ. ಲೋಕೇಶ್, ಚೆಟ್ಟಳ್ಳಿ ಗ್ರಾ.ಪಂ. ಅಧ್ಯಕ್ಷೆ ವಿಮಲಾಕ್ಷಿ, ಉಪಾಧ್ಯಕ್ಷೆ ಮಂಜುಳ, ಗ್ರಾ.ಪಂ. ಮಾಜಿ ಅಧ್ಯಕ್ಷೆ ರತ್ತು ಚಂಗಪ್ಪ, ವಾಲ್ನೂರು- ತ್ಯಾಗತ್ತೂರು ಗ್ರಾ.ಪಂ. ಸದಸ್ಯ ಅಂಚೆಮನೆ ಸುಧಿ, ಮಹಿಳಾ ಒಕ್ಕೂಟದ ಅಧ್ಯಕ್ಷೆ ಮೇರಿ ಅಂಬುದಾಸ್ ಹಾಜರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.