ಬೆಂಗಳೂರು: `ಕಿತ್ತೂರು ರಾಣಿ ಚೆನ್ನಮ್ಮನ ಹೋರಾಟದ ಗುಣಗಳನ್ನು ಆಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿರುವ ಹಿಂಸೆ ಮತ್ತು ಸ್ವಾರ್ಥ ಮನೋಭಾವವನ್ನು ದೂರಗೊಳಿಸಬಹುದು~ ಎಂದು ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್ ಅಭಿಪ್ರಾಯಪಟ್ಟರು.

ಭಾರತ ಯಾತ್ರಾ ಕೇಂದ್ರ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ವಿಜಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

`ಗಾಂಧೀಜಿಗಿಂತಲೂ ಮೊದಲು ದೇಶಕ್ಕಾಗಿ ಹೋರಾಟ ನಡೆಸಿದ ವೀರ ಮಹಿಳೆ ಚೆನ್ನಮ್ಮ~ ಎಂದು ಬಣ್ಣಿಸಿದರು.
ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್, `ಚೆನ್ನಮ್ಮನ ಜಯಂತ್ಯುತ್ಸವವನ್ನು ಸಂಸತ್ತು ಮತ್ತು ವಿಧಾನಮಂಡಲಗಳಲ್ಲಿ ಆಚರಿಸುವ ಮೂಲಕ ಆಕೆಯನ್ನು ಗೌರವಿಸಬೇಕು~ ಎಂದು ಹೇಳಿದರು.

`ಚೆನ್ನಮ್ಮನ ಸ್ಮರಣಾರ್ಥ ನಗರದ ಹೊರವಲಯದಲ್ಲಿ ಚೆನ್ನಮ್ಮ ರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು. ಇದು ಟಿಪ್ಪು ಸುಲ್ತಾನ್ ಸೇರಿದಂತೆ ಇತರೆ ದೇಶಭಕ್ತರ ಸ್ಮಾರಕಗಳನ್ನು ಒಳಗೊಳ್ಳಬೇಕು~ ಎಂದು ವಾಟಾಳ್ ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ರಾಣಿ ಸತೀಶ್, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷೆ ಮಾಲತಿ ಸುಧೀರ್ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.