ಚೆನ್ನಮ್ಮ ವಿ.ವಿ. ಪರೀಕ್ಷೆ ಮುಂದೂಡಿಕೆ

7

ಚೆನ್ನಮ್ಮ ವಿ.ವಿ. ಪರೀಕ್ಷೆ ಮುಂದೂಡಿಕೆ

Published:
Updated:

ಬೆಳಗಾವಿ: ಬಂದ್ ಹಿನ್ನೆಲೆಯಲ್ಲಿ ಶನಿವಾರ ನಡೆಯಬೇಕಿದ್ದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಜ. 22ರಂದು ನಡೆಯಲಿದ್ದ ಎಲ್ಲ ಪರೀಕ್ಷೆಗಳು ಜ. 31ರಂದು ನಡೆಯಲಿವೆ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ತಿಳಿಸಿದ್ದಾರೆ. ಉಳಿದಂತೆ ಇತರ ಪರೀಕ್ಷೆಗಳ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಅವರು ಪ್ರಕಟಣೆ ನೀಡಿದ್ದಾರೆ.ಪದವಿ ಶಿಕ್ಷಕರ ಪಟ್ಟಿ: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಎ, ಬಿಇಡಿ, ಬಿಎಸ್ಸಿ, ಬಿಪಿಇಡಿ ಮೊದಲಾದ ತರಬೇತಿ ಹೊಂದಿದ ಪದವೀಧರ ಶಿಕ್ಷಕರ ತಾತ್ಕಾಲಿಕ ಪಟ್ಟಿಯನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಗಳಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಯಾವುದೇ ನ್ಯೂನ್ಯತೆಗಳು ಕಂಡು ಬಂದಲ್ಲಿ ಅಥವಾ ಆಕ್ಷೇಪಣೆಗಳು ಇದ್ದಲ್ಲಿ ಇದೇ ಜ. 28ರೊಳಗಾಗಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವ್ಯವಸ್ಥಾಪಕರಿಗೆ ಖುದ್ದಾಗಿ ಮಾಹಿತಿ ಸಲ್ಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.ಬಿಇಡಿ ದ್ವಿತೀಯ ಸೆಮಿಸ್ಟರ್ ಪರೀಕ್ಷೆ: ಜ. 14ರಂದು ನಡೆದ ಬಿಇಡಿ ದ್ವಿತೀಯ ಸೆಮಿಸ್ಟರ್ ಪರೀಕ್ಷೆಯನ್ನು (ಎಂಒಟಿ ಕನ್ನಡ) ರದ್ದು ಮಾಡಲಾಗಿದ್ದು, ಸದರಿ ಪರೀಕ್ಷೆಯನ್ನು  ಇದೇ ಜ. 25ರಂದು ಬೆಳಿಗ್ಗೆ ಮತ್ತೆ ನಡೆಸಲಾಗುತ್ತದೆ. ಅಂದು ಎಲ್ಲ ಶಿಕ್ಷಕ ತರಬೇತಿ ಕೇಂದ್ರಗಳ ವಿದ್ಯಾರ್ಥಿಗಳು ಆಯಾ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ ಪರೀಕ್ಷೆ ತೆಗೆದುಕೊಳ್ಳಬೇಕು ಎಂದು ಬೆಳಗಾವಿ ಶಿಕ್ಷಕ ತರಬೇತಿ ಕೇಂದ್ರದ ಪ್ರಾಚಾರ್ಯರು ಪ್ರಕಟಣೆ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry