ಗುರುವಾರ , ಏಪ್ರಿಲ್ 15, 2021
21 °C

ಚೆನ್ನಮ್ಮ ವಿವಿ ಯುವಜನೋತ್ಸವಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಯುವಜನೋತ್ಸವಗಳು ಸಂಸ್ಕೃತಿಯನ್ನು ಪ್ರತಿಬಿಂಬಿಸಬೇಕು. ಉತ್ಸವದ ಸಂಘಟಕರು ವಿದ್ಯಾರ್ಥಿಗಳಿಗೆ ಅಂತಹ ವೇದಿಕೆಯನ್ನು ಸೃಷ್ಟಿಸಬೇಕು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಆರ್. ಅನಂತನ್ ಸೋಮವಾರ ಇಲ್ಲಿ ಹೇಳಿದರು.ಅವರು ಬೆಳಗಾವಿಯ ಆರ್‌ಪಿಡಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಮೊದಲನೇ ಯುವಜನೋತ್ಸವ ಉದ್ಘಾಟಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಪಠ್ಯದೊಂದಿಗೆ ಇತರೇ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಕಲೆ, ಸಾಹಿತ್ಯ ಹಾಗೂ ಇನ್ನಿತರ ಸಾಂಸ್ಕೃತಿಕ ಪ್ರತಿಭೆಗಳನ್ನು ಗುರುತಿಸಲು ಯುವಜನೋತ್ಸವವೇದಿಕೆಯಾಗಬೇಕು ಎಂದು  ಆಶಿಸಿದರು.ರಾಣಿ ಚೆನ್ನಮ್ಮ ವಿವಿಯ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ಅಧಿಕಾರಿ ಡಾ.ಡಿ.ಆರ್. ಅಲಬಾಳ ಮಾತನಾಡಿ, ವಿಶ್ವವಿದ್ಯಾಲಯದ ವತಿಯಿಂದ ಮೊದಲ ಯುವಜನೋತ್ಸವ ಆಚರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವೈಶಿಷ್ಟ್ಯಪೂರ್ಣವಾಗಿ ಯುವಜನೋತ್ಸವಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಎಸ್‌ಕೆಇ ಸಂಸ್ಥೆಯ ಉಪಾಧ್ಯಕ್ಷ ಡಾ. ಮೋಹನ ಶಾನಭಾಗ ಅವರು, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಒಂದು ವರ್ಷದ ಕೂಸಾಗಿದ್ದು, ಅದರ ಬೆಳವಣಿಗೆಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.ವಿದ್ಯಾರ್ಥಿ ಆಕಾಶ ಪಂಡಿತ ಪ್ರಾರ್ಥಿಸಿದರು. ಪೂರ್ಣಿಮಾ ಪಂಡಿತ ತಂಡದ ಸದಸ್ಯರು ನಾಡಗೀತೆ ಪ್ರಸ್ತುತಪಡಿಸಿದರು. ಆರ್‌ಪಿಡಿ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಎಲ್. ಕುಲಕರ್ಣಿ ಸ್ವಾಗತಿಸಿದರು. ಆರ್.ಜೆ. ಪವಾರ ವಂದಿಸಿದರು.ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳ ಸುಮಾರು 300 ವಿದ್ಯಾರ್ಥಿಗಳು ಯುವಜನೋತ್ಸವದಲ್ಲಿ ಪಾಲ್ಗೊಂಡಿದ್ದು, ಒಟ್ಟು 27 ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. ಯುವ ಜನೋತ್ಸವ ಸಮಾರೋಪ ಸಮಾರಂಭ ಏ.19ರಂದು ಮಧ್ಯಾಹ್ನ ಜರುಗಲಿದೆ.ಶಿಕ್ಷಕರ ಸಂಘದ ಜಿಲ್ಲಾ ಘಟಕಕ್ಕೆ ನೇಮಕ

ಬೆಳಗಾವಿ:
ಈಚೆಗೆ ಹಿರೇಬಾಗೇವಾಡಿಯಲ್ಲಿ ಜರುಗಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಮಾಸಿಕ ಸಭೆಯಲ್ಲಿ ಹೂಲಿಕವಿ ಶಾಲೆಯ ಸಹ ಶಿಕ್ಷಕರಾದ ಪ್ರಕಾಶ ಗುಂಡಪ್ಪ ರೊಟ್ಟಿ ಅವರನ್ನು ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಸಂಘದ ಪ್ರಧಾನ ಕಾರ್ಯದರ್ಶಿ ಐ.ಎಚ್.ನದಾಫ ಅವರ ಶಿಫಾರಸಿನ ಮೇರೆಗೆ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಡಿ. ಗಂಗಣ್ಣನವರ ಈ ನೇಮಕ ಮಾಡಿದ್ದಾರೆ.ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಅನ್ವರ ಲಂಗೋಟಿ, ಎಸ್.ಎನ್. ಪಾಟೀಲ, ಟಿ.ಎಂ. ಹುಕ್ಕೇರಿ ಮತ್ತಿತರರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.