ಶುಕ್ರವಾರ, ಏಪ್ರಿಲ್ 16, 2021
31 °C

ಚೆನ್ನೈಗೆ ಚಾಲೆಂಜರ್ಸ್ ಸವಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ (ಪಿಟಿಐ): ಸತತ ಎರಡು ಸೋಲುಗಳ ನಿರಾಸೆಯಿಂದ ಹೊರಬರುವ ಪ್ರಯತ್ನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದೆ ಕಠಿಣ ಸವಾಲು ಬಂದು ಕುಳಿತಿದೆ. ಶನಿವಾರ ನಡೆಯುವ ಪಂದ್ಯದಲ್ಲಿ ಡೇನಿಯಲ್ ವೆಟೋರಿ ನೇತೃತ್ವದ ಆರ್‌ಸಿಬಿ ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ಜೊತೆ ಪೈಪೋಟಿ ನಡೆಸಲಿದೆ.ಕೊಚ್ಚಿ ಟಸ್ಕರ್ಸ್ ಕೇರಳ ವಿರುದ್ಧದ ಗೆಲುವಿನೊಂದಿಗೆ ಐಪಿಎಲ್ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದ ಆರ್‌ಸಿಬಿ ಬಳಿಕ ಎರಡು ಸೋಲಿನ ಕಹಿ ಅನುಭವಿಸಿದೆ. ಮುಂಬೈ ಇಂಡಿಯನ್ಸ್ ಹಾಗೂ ಡೆಕ್ಕನ್ ಚಾರ್ಜರ್ಸ್ ಎದುರು ತಂಡ ಪರಾಭವಗೊಂಡಿತ್ತು.ಮಹೇಂದ್ರ ಸಿಂಗ್ ದೋನಿ ಬಳಗ ಕೂಡಾ ಸೋಲಿನ ನಿರಾಸೆಯೊಂದಿಗೆ ಈ ಪಂದ್ಯಕ್ಕಾಗಿ ಕಣಕ್ಕಿಳಿಯುತ್ತಿದೆ. ಮೊಹಾಲಿಯಲ್ಲಿ ನಡೆದ ಕಳೆದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಎದುರು ಸೋಲು ಎದುರಾಗಿತ್ತು. ಮೊದಲು ಬ್ಯಾಟ್ ಮಾಡಿ 188 ರನ್ ಪೇರಿಸಿದ್ದರೂ ತಂಡಕ್ಕೆ ಗೆಲುವು ಪಡೆಯಲು ಆಗಿರಲಿಲ್ಲ. ಇದೀಗ ಉಭಯ ತಂಡಗಳು ಗೆಲುವಿನ ಟ್ರ್ಯಾಕ್‌ಗೆ ಮರಳುವ ಕನಸು ಕಾಣುತ್ತಿದೆ. ಆದ್ದರಿಂದ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಶನಿವಾರ ಪ್ರಬಲ ಪೈಪೋಟಿ ನಿರೀಕ್ಷಿಸಬಹುದು.ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು


ಡೇನಿಯಲ್ ವೆಟೋರಿ (ನಾಯಕ), ವಿರಾಟ್ ಕೊಹ್ಲಿ, ತಿಲಕರತ್ನೆ ದಿಲ್ಶಾನ್, ಎಬಿ ಡಿವಿಲಿಯರ್ಸ್, ಜಹೀರ್ ಖಾನ್, ಚೇತೇಶ್ವರ ಪೂಜಾರ, ಸೌರಭ್ ತಿವಾರಿ, ಮೊಹಮ್ಮದ್ ಕೈಫ್, ಮಯಾಂಕ್ ಅಗರ್‌ವಾಲ್, ಜಾನ್ ವಾನ್ ಡೆರ್ ವರ್ಥ್, ಜೊನಾಥನ್ ವಾಂಡೀರ್, ಸಿ.ಎಂ. ಗೌತಮ್, ಚಾರ್ಲ್ ಲಾಂಗ್‌ವೆಲ್ಟ್, ಡಿರ್ಕ್ ನಾನೆಸ್, ಅಭಿಮನ್ಯು ಮಿಥುನ್, ಅಸದ್ ಖಾನ್ ಪಠಾಣ್.ಚೆನ್ನೈ ಸೂಪರ್ ಕಿಂಗ್ಸ್

ಮಹೇಂದ್ರ ಸಿಂಗ್ ದೋನಿ (ನಾಯಕ), ಸುರೇಶ್ ರೈನಾ, ಮುರಳಿ ವಿಜಯ್, ಮೈಕ್ ಹಸ್ಸಿ, ಶ್ರೀಕಾಂತ್ ಅನಿರುದ್ಧ್, ಎಸ್. ಬದರೀನಾಥ್, ಡಗ್ ಬೋಲಿಂಜರ್, ವೃದ್ದಿಮನ್ ಸಹಾ, ಅಭಿನವ್ ಮುಕುಂದ್, ಅಲ್ಬಿ ಮಾರ್ಕೆಲ್, ಸ್ಕಾಟ್ ಸ್ಟೈರಿಸ್, ಟಿಮ್ ಸೌಥಿ, ಆರ್. ಅಶ್ವಿನ್, ಬೆನ್ ಹಿಲ್ಫೆನಾಸ್, ಜೋಗಿಂದರ್ ಶರ್ಮ, ನುವಾನ್ ಕುಲಶೇಖರ, ಸುದೀಪ್ ತ್ಯಾಗಿ, ಸೂರಜ್ ರಂದೀವ್, ಶಾದಾಬ್ ಜಕಾತಿ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.