ಶುಕ್ರವಾರ, ಮೇ 27, 2022
31 °C

ಚೆನ್ನೈಗೆ ಟ್ರಿನಿಡಾಡ್ ಸವಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ (ಪಿಟಿಐ): ಕಳೆದ ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸೆಮಿಫೈನಲ್‌ನಲ್ಲಿ ಸ್ಥಾನವನ್ನು ಖಚಿತಪಡಿಸಲು ಇನ್ನೂ ಸಾಧ್ಯವಾಗಿಲ್ಲ.ಆಡಿದ ಎರಡು ಪಂದ್ಯಗಳಿಂದ ಎರಡು ಪಾಯಿಂಟ್ ಕಲೆಹಾಕಿರುವ ಮಹೇಂದ್ರ ಸಿಂಗ್ ದೋನಿ ಬಳಗ `ಎ~ ಗುಂಪಿನಲ್ಲಿ ಮೂರನೇ ಸ್ಥಾನದಲ್ಲಿದೆ.ಭಾನುವಾರ ಇಲ್ಲಿ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ತಂಡ ಟ್ರಿನಿಡಾಡ್ ಅಂಡ್ ಟೊಬಾಗೊ ವಿರುದ್ಧ ಪೈಪೋಟಿ ನಡೆಸಲಿದೆ. ವೆಸ್ಟ್ ಇಂಡೀಸ್‌ನ ಟ್ರಿನಿಡಾಡ್ ಆಡಿದ ಎರಡೂ ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.ಸೆಮಿಫೈನಲ್‌ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಲು ಸೂಪರ್     ಕಿಂಗ್ಸ್‌ಗೆ ಇನ್ನುಳಿದ ಎರಡೂ ಪಂದ್ಯಗಳಲ್ಲಿ ಗೆಲುವು ಅನಿವಾರ್ಯ.ಮುಂಬೈ ಎದುರಾಳಿ ವೇಲ್ಸ್: ಭಾನುವಾರ ಸಂಜೆ ನಡೆಯಲಿರುವ  ಇನ್ನೊಂದು ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ನ್ಯೂ ಸೌತ್ ವೇಲ್ಸ್ ತಂಡಗಳು ಎದುರಾಗಲಿವೆ. ಹರಭಜನ್ ಸಿಂಗ್ ನೇತೃತ್ವದ ಮುಂಬೈ ಮೂರು ಪಂದ್ಯಗಳಿಂದ ಐದು ಪಾಯಿಂಟ್ ಹೊಂದಿದೆ. ಆದ್ದರಿಂದ ವೇಲ್ಸ್ ವಿರುದ್ಧ ಗೆದ್ದರೆ ನಾಲ್ಕರಘಟ್ಟಕ್ಕೆ ಅರ್ಹತೆ ಪಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.