ಭಾನುವಾರ, ಅಕ್ಟೋಬರ್ 20, 2019
21 °C

ಚೆನ್ನೈ-ಹೌರಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ಪ್ರಯಾಣಿಕರು ಪಾರು

Published:
Updated:

ಭುವನೇಶ್ವರ: ಚೆನ್ನೈ-ಹೌರಾ ಎಕ್ಸ್‌ಪ್ರೆಸ್ ರೈಲಿನ ಸಾಮಾನ್ಯ ಬೋಗಿಯಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯನ್ನು ತಕ್ಷಣವೇ ನಂದಿಸಿದ್ದರಿಂದ ಯಾವುದೇ ಹಾನಿ ಸಂಭವಿಸಿಲ್ಲ.ಭುವನೇಶ್ವರ ಮುಖ್ಯ ರೈಲು ನಿಲ್ದಾಣದ ಕಡೆಗೆ ಹೊರಟಿದ್ದ ಈ ರೈಲು ಲಿಂಗರಾಜ ನಿಲ್ದಾಣದ ಸಮೀಪ ಆಗಮಿಸುತ್ತಿದ್ದಾಗ ಎಂಜಿನ್‌ನಿಂದ ಎರಡನೇ ಬೋಗಿಯಲ್ಲಿ ಬೆಂಕಿ ಕಾಣಿಸಿತು ಎಂದು ಪಶ್ಚಿಮ ಕರಾವಳಿ ರೈಲ್ವೆ ವಕ್ತಾರರು ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಬೆಂಕಿ ಕಾಣಿಸಿ ಪ್ರಯಾಣಿಕರು ರೈಲಿನ ತುರ್ತು ಸರಪಳಿ ಎಳೆದು ನಿಲ್ಲಿಸಿದರು. ಬಳಿಕ ಬೋಗಿಯಲ್ಲಿದ್ದ ಪ್ರಯಾಣಿಕರು ತಕ್ಷಣವೇ ಹೊರಗೆ ಬಂದರು. ಇದರಿಂದ ಎರಡು ಗಂಟೆಗಳ ಕಾಲ ರೈಲು ಸಂಚಾರ ವಿಳಂಬವಾಯಿತು. ಬೋಗಿಯ ಕೆಲ ಭಾಗ ಜಖಂಗೊಂಡಿದೆ.ಪ್ರಯಾಣಿಕರ ನಿರ್ಲಕ್ಷ್ಯದಿಂದ ಈ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿದ್ದು, ಘಟನೆಗೆ ಕಾರಣ ತಿಳಿಯಲು ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

 

Post Comments (+)