ಚೈತನ್ಯದ ಬದುಕಿಗೆ ಕ್ರೀಡೆ ಅತ್ಯಗತ್ಯ

7

ಚೈತನ್ಯದ ಬದುಕಿಗೆ ಕ್ರೀಡೆ ಅತ್ಯಗತ್ಯ

Published:
Updated:

ದಾವಣಗೆರೆ: ಕ್ರೀಡೆ ಇಲ್ಲದೇ ಮನುಷ್ಯ ಲವಲವಿಕೆಯಿಂದ ಬಾಳುವುದು ಕಷ್ಟ ಎಂದು ಶಾಸಕ ಎಂ. ಬಸವರಾಜ ನಾಯ್ಕ ಹೇಳಿದರು.ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಶಿಕ್ಷಣ ಇಲಾಖೆ ಆಶ್ರಯದಲ್ಲಿ ಸೋಮವಾರ ನಡೆದ ಬೆಂಗಳೂರು ವಿಭಾಗಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಕ್ರೀಡೆ ಬದುಕಿಗೆ ಬಹಳ ಅವಶ್ಯಕ. ಆಟದಲ್ಲಿ ಸೋಲು-ಗೆಲುವು ಸಹಜ, ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು. ಇಲ್ಲಿ ಭಾಗವಹಿಸಿರುವ ಕ್ರೀಡಾಳುಗಳು ರಾಷ್ಟ್ರಮಟ್ಟದ ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು.ಸಮಾರಂಭ ಉದ್ಘಾಟಿಸಿದ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಮೆಳ್ಳೆಕಟ್ಟೆ ಚಿದಾನಂದ ಐಗೂರು ಮಾತನಾಡಿ, ಜಿಲ್ಲೆಯಲ್ಲಿ ಆಯೋಜಿಸಿರುವ ಪಂದ್ಯಗಳು ಲೋಪ-ದೋಷಗಳಿಲ್ಲದೆ ಯಶಸ್ವಿಯಾಗಲಿ. ಕ್ರೀಡಾಪಟುಗಳು ತೀರ್ಪುಗಾರರು ನೀಡುವ ತೀರ್ಪು ಗೌರವಿಸಬೇಕು ಎಂದರು.ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಸುಧಾ ವೀರೇಂದ್ರ ಪಾಟೀಲ್, ಸದಸ್ಯೆ ಸಹನಾ ರವಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎ.ಬಿ. ಹೇಮಚಂದ್ರ, ಶಿಕ್ಷಣ ಇಲಾಖೆ ಉಪ ನಿರ್ದೇಶಕ    ಡಿ.ಕೆ. ಶಿವಕುಮಾರ್, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಎ. ತ್ರಿಲೋಕ್      ಸಿಂಗ್, ಶಿಕ್ಷಣ ಸಮನ್ವಯಾಧಿಕಾರಿ ಗಂಗಾಧರ ಸ್ವಾಮಿ, ಆರ್. ಸುರೇಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry