ಭಾನುವಾರ, ಜನವರಿ 26, 2020
27 °C

ಚೌಹಾಣ್‌ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭೋಪಾಲ್‌ (ಪಿಟಿಐ): ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಶನಿವಾರ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಇದರೊಂದಿಗೆ 54 ವರ್ಷದ ಚೌಹಾಣ್‌ ಅವರು ಸತತ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಡಳಿತ ಚುಕ್ಕಾಣಿ ಹಿಡಿದರು.ಇಲ್ಲಿನ ಜಂಬೋರಿ ಮೈದಾನದಲ್ಲಿ ಬಿಗಿ ಭದ್ರತೆಯೊಂದಿಗೆ ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ರಾಂ ನರೇಶ್‌ ಯಾದವ್‌ ಅವರು ಪ್ರತಿಜ್ಞಾವಿಧಿ ಬೋಧಿಸಿದರು.ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ, ಪಕ್ಷದ ಮುಖ್ಯಸ್ಥ ರಾಜನಾಥ್‌ ಸಿಂಗ್‌, ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ, ಶಿವಸೇನೆ ಮತ್ತು ಶಿರೋಮಣಿ ಅಕಾಲಿದಳದ ಹಿರಿಯ ನಾಯಕರು, ಪಕ್ಷದ ರಾಜ್ಯ ಉಸ್ತುವಾರಿ ಅನಂತ ಕುಮಾರ್‌ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಪ್ರತಿಕ್ರಿಯಿಸಿ (+)