ಸೋಮವಾರ, ಜನವರಿ 20, 2020
27 °C

ಛತ್ತೀಸಗಡ ಮುಖ್ಯಮಂತ್ರಿಯಾಗಿ ರಮಣ್‌ ಸಿಂಗ್‌ ಪ್ರಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯ್‌ಪುರ (ಪಿಟಿಐ): ಸತತ ಮೂರನೇ ಬಾರಿಗೆ ಛತ್ತೀಸಗಡ ಮುಖ್ಯಮಂತ್ರಿಯಾಗಿ ಡಾ.ರಮಣ್‌ ಸಿಂಗ್‌ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

ಪೊಲೀಸ್‌ ಕವಾಯತು ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಶೇಖರ್‌ ದತ್‌ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣ ವಚನ ಬೋಧಿಸಿದರು.ಸಮಾರಂಭದಲ್ಲಿ ಬಿಜೆಪಿ ಅಧ್ಯಕ್ಷ ರಾಜನಾಥ್‌ ಸಿಂಗ್‌, ಪಕ್ಷದ ಹಿರಿಯ ನಾಯಕರಾದ ಎಲ್‌.ಕೆ. ಆಡ್ವಾಣಿ, ಲೋಕಸಭೆ ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್‌, ರಾಜ್ಯಸಭೆ ಪ್ರತಿಪಕ್ಷ ನಾಯಕ ಅರುಣ್‌ ಜೇಟ್ಲಿ, ಗುಜರಾತ್‌ ಮುಖ್ಯಮಂತ್ರಿ ನರೇಂದ್ರ ಮೋದಿ, ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌  ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.90 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 49 ಸ್ಥಾನಗಳನ್ನು ಪಡೆದುಕೊಂಡಿದೆ. ಈ ಮೂಲಕ ರಮಣ್‌ ಸಿಂಗ್‌ ಬಿಜೆಪಿಯ ಹ್ಯಾಟ್ರಿಕ್‌ ಮುಖ್ಯಮಂತ್ರಿಗಳ ಗುಂಪಿಗೆ ಸೇರಿದ್ದಾರೆ.

ಪ್ರತಿಕ್ರಿಯಿಸಿ (+)