ಛಾಯಾಗ್ರಹಣ ಅಪರೂಪದ ಕಲೆ

ಭಾನುವಾರ, ಮೇ 19, 2019
32 °C

ಛಾಯಾಗ್ರಹಣ ಅಪರೂಪದ ಕಲೆ

Published:
Updated:
ಛಾಯಾಗ್ರಹಣ ಅಪರೂಪದ ಕಲೆ

ಬೆಂಗಳೂರು: `ಕಣ್ಣಿಂದ ನೋಡಲು ಸಾಧ್ಯವಾಗುವ ಎಲ್ಲವನ್ನೂ ಹಿಡಿದಿಡುವ ಅಪರೂಪದ ಕಲೆ ಛಾಯಾಗ್ರಹಣ~ ಎಂದು ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅಭಿಪ್ರಾಯಪಟ್ಟರು.ಬೆಂಗಳೂರು ಜಿಲ್ಲಾ ಫೋಟೋ ಸ್ಟುಡಿಯೊ ಮಾಲೀಕರ ಸಂಘದ ವತಿಯಿಂದ ನಗರದ ಚಿತ್ರಕಲಾ ಪರಿಷತ್‌ನಲ್ಲಿ ಭಾನುವಾರ ನಡೆದ ವಿಶ್ವ ಛಾಯಾಗ್ರಾಹಕರ ದಿನ ಹಾಗೂ ಸಂಘದ 4ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮೇಯರ್ ಡಿ.ವೆಂಕಟೇಶಮೂರ್ತಿ ಮಾತನಾಡಿ, `ಸಂಘವು ಮಾಡುತ್ತಿರುವ ಕಾರ್ಯಕ್ಕೆ ಪಾಲಿಕೆಯ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು~ ಎಂದು ಭರವಸೆ ನೀಡಿದರು.ಛಾಯಾಗ್ರಾಹಕರಾದ ಸೀತಾರಾಮ ರೈ, ಕೆ.ಶಂಕರ ನಾರಾಯಣ, ಆನಂದ್, ಮುಕುಂದ್ ಮತ್ತು ಜೈರಾಮ್ ಅವರಿಗೆ `ಸ್ಟುಡಿಯೊ ರತ್ನ~ ಪ್ರಶಸ್ತಿ ನೀಡಲಾಯಿತು. ಹಿರಿಯ ಚಲನಚಿತ್ರ ಛಾಯಾಗ್ರಾಹಕ ವಿ.ಕೆ.ಮೂರ್ತಿ ಹಾಗೂ ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅವರನ್ನು ಸನ್ಮಾನಿಸಲಾಯಿತು.ವಿಶ್ವ ಛಾಯಾಗ್ರಾಹಕರ ದಿನದ ಅಂಗವಾಗಿ ಅಪರೂಪದ ಛಾಯಾಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಉಪ ಮುಖ್ಯಮಂತ್ರಿ ಆರ್.ಇತರರು ಉಪಸ್ಥಿತರಿದ್ದರು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry