ಬುಧವಾರ, ಏಪ್ರಿಲ್ 21, 2021
24 °C

ಜಂಜಡ ಮುಕ್ತಿಗೆ ಕ್ರೀಡೆ ಸಹಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ರಾಜಕಾರಣಿಗಳು ಭ್ರಷ್ಟಾ ಚಾರ, ಕ್ರೀಡಾಪಟುಗಳು ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಸಮಾಜ ಉಳಿಸಲು ಸಾಧ್ಯ ಎಂದು  ಜಾತ್ಯತೀತ ಜನತಾ ದಳ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಚ್.ದೇವರಾಜ್ ಅಭಿಪ್ರಾಯಪಟ್ಟರು.ಭಾರತ ಸೇವಾದಳವು ಶಂಕರಪುರದ ಫ್ರೆಂಡ್ಸ್ ಯುವಕ ಸಂಘದ ಸಹಯೋಗದಲ್ಲಿ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಭಾನು ವಾರ ಆಯೋಜಿಸಿದ್ದ ರಾಜ್ಯಮಟ್ಟದ ಹೊನಲು- ಬೆಳಕಿನ ‘ಫ್ರೆಂಡ್ಸ್ ಕಪ್-2011’ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.ಮಾಜಿ ಶಾಸಕ ಐ.ಬಿ.ಶಂಕರ್ ಮಾತನಾಡಿ, ರಾಜಕೀಯ ಹಾಗೂ ನಿತ್ಯ ಜೀವನದ ಜಂಜಡದಿಂದ ಹೊರಬರಲು ಕ್ರೀಡೆ ಸಹಕಾರಿ. ಜೀವನಪೂರ್ತಿ ಕೀಡೆಯಲ್ಲಿ ತೊಡಗಿಸಿಕೊಂಡು ಹಲವಾರು ಕ್ರೀಡಾಪಟುಗಳು ಮತ್ತು ತರಬೇತುದಾರರು ಸಾಧನೆ ಮಾಡಿದ್ದಾರೆ. ಸೋಲು, ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ ಎಂದು ತಿಳಿಸಿದರು.ಭಾರತ ಸೇವಾದಳದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಚ್.ನರೇಂದ್ರಪೈ, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ವಿಶ್ವನಾಥ್, ಪ್ರಣವ ಟ್ರಾನ್ಸ್‌ಪೋರ್ಟ್ ಮಾಲೀಕರಾದ ಎಸ್.ಡಿ.ಚಂದ್ರೇಗೌಡ, ನಗರಸಭಾ ಸದಸ್ಯ ದೇವೀಪ್ರಸಾದ್, ಎಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಅಧ್ಯಕ್ಷ ಹೊಲದಗದ್ದೆ ಗಿರೀಶ್, ಯುವ ಕಾಂಗ್ರೆಸ್ ಮುಖಂಡ ಶ್ರೀಕಾಂತ್, ಫ್ರೆಂಡ್ಸ್ ಯುವಕ ಸಂಘದ ಅಧ್ಯಕ್ಷ ಜಿ.ನವೀನ್, ಉಪಾಧ್ಯಕ್ಷರಾದ ಭರಣಿ, ವಿನಯಸುವರ್ಣ, ಸಹ ಕಾರ್ಯದರ್ಶಿ ಮಂಜು, ಎಸ್.ರವಿ, ಖಜಾಂಚಿ ಸನ್ನಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.