ಸೋಮವಾರ, ಜನವರಿ 20, 2020
24 °C

ಜಂಟಿ ಅಧಿವೇಶನ: ರಾಜ್ಯಪಾಲರಿಗೆ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಶನಿವಾರ ಬೆಳಿಗ್ಗೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ಭೇಟಿ ಮಾಡಿ ಇದೇ 30ರಂದು ನಡೆಯಲಿರುವ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಅಧಿಕೃತ ಆಹ್ವಾನ ನೀಡಿದರು.ಸುಮಾರು ಅರ್ಧ ಗಂಟೆ ಕಾಲ ರಾಜ್ಯಪಾಲರ ಜತೆ ಇದ್ದ ಅವರು, ಕಾನೂನು-ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು. ನಂತರ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ, `ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಆಹ್ವಾನ ನೀಡಿದ್ದು ಬಿಟ್ಟರೆ, ಬೇರೆ ಯಾವುದೇ ವಿಷಯದ ಬಗ್ಗೆ ಚರ್ಚೆ ನಡೆಸಿಲ್ಲ~ ಎಂದು ಹೇಳಿದರು.`ಬಿಜೆಪಿಯಲ್ಲಿನ ಒಗ್ಗಟ್ಟು ಸಹಿಸದ ಪ್ರತಿಪಕ್ಷಗಳ ಕೆಲವು ಮುಖಂಡರು ನಮ್ಮ ನಾಯಕರಿಗೆ ಹೊಸ ಪಕ್ಷ ಕಟ್ಟುವಂತೆ ಸಲಹೆ ನೀಡುತ್ತಿದ್ದಾರೆ~ ಎಂದು ಪರೋಕ್ಷವಾಗಿ ಕಾಂಗ್ರೆಸ್ ಸಂಸದ ಎಚ್.ವಿಶ್ವನಾಥ್ ಅವರನ್ನು ಛೇಡಿಸಿದರು.

ಪ್ರತಿಕ್ರಿಯಿಸಿ (+)