ಗುರುವಾರ , ಅಕ್ಟೋಬರ್ 17, 2019
26 °C

ಜಂಟಿ ಅಧಿವೇಶನ: ರಾಜ್ಯಪಾಲರಿಗೆ ಸದ್ಯದಲ್ಲೇ ಅಧಿಕೃತ ಆಹ್ವಾನ

Published:
Updated:

ಬೆಂಗಳೂರು: ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ಸದ್ಯದಲ್ಲೇ ಭೇಟಿ ಮಾಡಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಅಧಿಕೃತ ಆಹ್ವಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಶನಿವಾರ ಇಲ್ಲಿ ಹೇಳಿದರು.ಇಂಧನ, ಕನ್ನಡ ಮತ್ತು ಸಂಸ್ಕೃತಿ, ಸಣ್ಣ ನೀರಾವರಿ, ಪ್ರವಾಸೋದ್ಯಮ ಸೇರಿದಂತೆ ಇತರ ಕೆಲ ಇಲಾಖೆಗಳ ಪ್ರಗತಿ ಪರಿಶೀಲನೆ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಇದೇ 9ರಂದು ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗುವುದು. ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲಿಸಿದ ನಂತರ ಬಜೆಟ್ ತಯಾರಿಗೆ ಕೈಹಾಕಲಾಗುವುದು ಎಂದು ಹೇಳಿದರು.

 

ಸದ್ಯಕ್ಕೆ ಐದಾರು ಜಿಲ್ಲೆಗಳಲ್ಲಿ ಮಾತ್ರ ಕುಡಿಯುವ ನೀರಿನ ಸಮಸ್ಯೆ ಇದೆ. ಉಳಿದಂತೆ ಎಲ್ಲಿಯೂ ಇಲ್ಲ. ತುಮಕೂರು, ಕೋಲಾರ ಸೇರಿದಂತೆ ಇತರ ಕೆಲ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಶಾಶ್ವತ ಪರಿಹಾರಕ್ಕೆ ಪ್ರಯತ್ನಗಳು ಸಾಗಿವೆ ಎಂದರು.

Post Comments (+)