ಜಂಬದಹಳ್ಳ ಯೋಜನೆ: ರೂ 25 ಕೋಟಿ

7

ಜಂಬದಹಳ್ಳ ಯೋಜನೆ: ರೂ 25 ಕೋಟಿ

Published:
Updated:

ತರೀಕೆರೆ: ತಾಲ್ಲೂಕಿನ ರೈತರ ಬಹುದಿನದ ಬೇಡಿಕೆಯಾದ ’ಜಂಬದಹಳ್ಳ ಜಲಾಶಯದ ಹೋದಿ ರಾಯನಹಳ್ಳದ ಪಥ ಪರಿವರ್ತನಾ ಯೋಜನೆ’ ಜಾರಿಗೆ ಕಳೆದ 30 ವರ್ಷಗಳಿಂದ ಹೋರಾಟ ನಡೆಸುತ್ತಿದ್ದ ರೈತರಿಗೆ ರಾಜ್ಯ ಸರ್ಕಾರ ತಾಂತ್ರಿಕ ಅನುಮೋದನೆ ಆಧಾರ ಆಡಳಿತಾತ್ಮಕ ಮಂಜೂರಾತಿ ನೀಡಿದೆ ಎಂದು ಶಾಸಕ ಡಿ.ಎಸ್.

ಸುರೇಶ್ ಹರ್ಷ ವ್ಯಕ್ತಪಡಿಸಿದರು.ಪಟ್ಟಣದಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಸುರೇಶ್, ಮಾರ್ಚ್‌ನಲ್ಲಿ ತಾಲ್ಲೂಕಿನ ಕುಡ್ಲೂರು ಗ್ರಾಮಕ್ಕೆ ಭೇಟಿ ನೀಡುವ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ನೀರಾವರಿ ಸಚಿವ ಬಸವರಾಜ್ ಬೊಮ್ಮಾಯಿ ಸಮ್ಮುಖದಲ್ಲಿ ಯೋಜನೆ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎನ್.ಮಂಜುನಾಥ್ ಮಾತನಾಡಿದರು. ಯೋಜನೆ ಹೋರಾಟಗಾರ ಆಚಾರಿ ಮಂಜಣ್ಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಆರ್.ರವಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಆರ್.ಆನಂದಪ್ಪ, ಶಂಬೈನೂರು ಆನಂದಪ್ಪ, ಎಂ.ಕೃಷ್ಣಮೂರ್ತಿ, ದುಗ್ಲಾಪುರದ ರೈತ ಮುಖಂಡರಾದ ನಂಜುಂಡಪ್ಪ, ಪರಮೇಶ್ವರಪ್ಪ, ಮಹೇಶ್ವರಪ್ಪ, ಕೆ.ಟಿ.ರವಿ, ಬಿಜೆಪಿ ತಾಲ್ಲೂಕು ಘಟಕ ಅಧ್ಯಕ್ಷ ಶಾಂತರಾಜ್ ಮತ್ತಿತರರು ಸಭೆಯಲ್ಲಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry