ಶುಕ್ರವಾರ, ಜೂನ್ 25, 2021
29 °C

ಜಗಜೀವನರಾಂ, ಅಂಬೇಡ್ಕರ್ ಜನ್ಮದಿನ: ಅದ್ದೂರಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧ ರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ನಗರದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾತಂಡಗಳೊಂ ದಿಗೆ ಮೆರವಣಿಗೆ ನಡೆಸಲಾಗುವುದು. ನಂತರ ವೇದಿಕೆ ಕಾರ್ಯಕ್ರಮ ನಡೆಯ ಲಿದ್ದು,  ಗಣ್ಯರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.ಇವರ ಜೀವನ, ಸಾಧನೆ ಕುರಿತು ಉಪನ್ಯಾಸ ಕಾರ್ಯಕ್ರಮ ವನ್ನೂ ನಡೆಸಲಾಗುವುದು. ದಲಿತ  ಫಲಾನು ಭವಿಗಳಿಗೆ ಇದೇ ವೇಳೆ ವಿವಿಧ ಸೌಲಭ್ಯ ವಿತರಿಸಲಾಗುವುದು.  ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗು ವುದು. ಸರ್ಕಾರಿ ಕಚೇರಿ ಮತ್ತು ಶಾಲೆಗಳಲ್ಲಿ ಇಬ್ಬರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಗೌರವಿಸಲಾಗುವುದು ಎಂದು ಅವರು ತಿಳಿಸಿದರು.ಈ ಮಹನೀಯರ ಭಾವಚಿತ್ರಗಳನ್ನು ಎಲ್ಲ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಅಳವಡಿಸುವಂತೆ ಸುತ್ತೋಲೆ ಹೊರ ಡಿಸಲಾಗುವುದು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮಂಜುನಾಥ್ ನಾಯಕ್ ತಿಳಿಸಿದರು.

ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಾಜಪ್ಪ ಸಭೆಗೆ ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು.

 

ಸಭೆಯಲ್ಲಿ ಡಿವೈಎಸ್‌ಪಿ ಮುರುಗಣ್ಣವರ್, ತಹಶೀಲ್ದಾರ್ ಶಶಿಧರ್ ಬಗಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಾಯಕ ನಿರ್ದೇಶಕ ಟಿ. ಕೊಟ್ರಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿ.ಎನ್. ಮೇಟಿ, ಪರಿಶಿಷ್ಟ ಕಲ್ಯಾಣಾಧಿಕಾರಿ ಪೋಲಯ್ಯ, ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗದ ಕಾರ್ಯ ನಿರ್ವಾಹಕ ಎಂಜಿನಿಯರ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಶರಣಪ್ಪ,  ಜಯ ಪ್ರಕಾಶ್, ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್,  ಎಲ್. ಮಾರೆಣ್ಣ, ಬಿ.ನಲ್ಲಣ್ಣ, ಎ. ಮಾನಯ್ಯ, ಎಂ.ಎರ‌್ರೆಣ್ಣ, ರಾಮಪ್ಪ, ಎಚ್. ಹನುಮಂತಪ್ಪ, ಗಿರಿಮಲ್ಲಪ್ಪ, ವಿ.ಎನ್. ಗಿರಿಮಲ್ಲಪ್ಪ, ಎ. ಈಶ್ವರಪ್ಪ, ಗಾಜಣ್ಣ, ಸುಂದರಯ್ಯ, ಮುಂಡರಗಿ ನಾಗರಾಜ್, ಎನ್.ಕೆ. ಸದಾಶಿವಪ್ಪ, ಚಲಪತಿ, ವಿಘ್ನೇಶ್ ಮತ್ತು ಇತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.